HomeKarnatakaರೈತರಿಗೆ ಗುಡ್ ನ್ಯೂಸ್: ಕ್ವಿಂಟಾಲ್ ಗೆ 5875 ರೂ. ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ ನೋಂದಣಿ...

ರೈತರಿಗೆ ಗುಡ್ ನ್ಯೂಸ್: ಕ್ವಿಂಟಾಲ್ ಗೆ 5875 ರೂ. ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ ನೋಂದಣಿ ಆರಂಭ

ಚಿತ್ರದುರ್ಗ: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ವತಿಯಿಂದ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಜಿಲ್ಲೆಯ ರೈತರಿಂದ ಕಡಲೆಕಾಳು ಖರೀದಿಸಲು ಉದ್ದೇಶಿಸಲಾಗಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ ಎಂದು ಕೆಎಸ್‍ಸಿಎಂಎಫ್ ಚಿತ್ರದುರ್ಗ ಶಾಖಾ ವ್ಯವಸ್ಥಾಪಕ ಬಸವೇಶ ತಿಳಿಸಿದ್ದಾರೆ.

ನಾಫೆಡ್ ಸಂಸ್ಥೆಯ ಸಹಯೋಗದೊಂದಿಗೆ ಕಡಲೆಕಾಳು ಖರೀದಿ ಪ್ರಕ್ರಿಯೆ ನಡೆಯಲಿದ್ದು, ಜಿಲ್ಲೆಯ ರೈತರು ತಮ್ಮ ಆಧಾರ್ ಕಾರ್ಡ್ ಬಳಸಿ ಬಯೋಮೆಟ್ರಿಕ್ ಮೂಲಕ ನಿಗದಿತ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಸರ್ಕಾರದ ಆದೇಶದಂತೆ ಪ್ರತಿ ಕ್ವಿಂಟಾಲ್‍ಗೆ ರೂ.5875ರಂತೆ ಪ್ರತಿ ರೈತರಿಂದ ಪ್ರತಿ ಎಕರೆಗೆ 4 ಕ್ವಿಂಟಾಲ್ ನಂತೆ ಗರಿಷ್ಟ 40 ಕ್ವಿಂಟಾಲ್ ನಿಗದಿಪಡಿಸಿದ್ದು, ಕಡಲೆಕಾಳು ಖರೀದಿ ಮಾಡಲು ಜಿಲ್ಲಾ ಟಾಸ್ಕ್‍ಪೋರ್ಸ್‍ನಲ್ಲಿ ತೀರ್ಮಾನಿಸಲಾಗಿದೆ.

ಕಡಲೆಕಾಳು ಖರೀದಿ ಕೇಂದ್ರಗಳ ಮಾಹಿತಿ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದುರ್ಗ ತಾಲೂಕಿನಲ್ಲಿ ಚಿತ್ರದುರ್ಗ ಟೌನ್ ಸಹಕಾರ ಸಂಘ-8904308894, ಮಾಡನಾಯಕನಹಳ್ಳಿ-7975789403, ಚಿಕ್ಕಗೊಂಡನಹಳ್ಳಿ ಸಹಕಾರಿ ಸಂಘ-6362187408 ಹಾಗೂ ತುರವನೂರಿನ ಶ್ರೀ ಮಂಜುನಾಥ ಸ್ವಾಮಿ ರೈತ ಉತ್ಪಾದಕರ ಕಂಪನಿ-9620266826, ಚಳ್ಳಕೆರೆ ತಾಲೂಕಿನಲ್ಲಿ ರಾಮಜೋಗಿಹಳ್ಳಿ-9741392578, ಚಿಕ್ಕಮಧುರೆ ಸಹಕಾರ ಸಂಘ-6362928198, ಚಳ್ಳಕೆರೆ ಟಿಎಪಿಸಿಎಂಎಸ್-9844897046,  ಹಿರಿಯೂರು ತಾಲೂಕಿನಲ್ಲಿ ಮರಡಿಹಳ್ಳಿ ಸಹಕಾರ ಸಂಘ-9972604427, ಭರಂಪುರ (ಐಮಂಗಲ) ಸಹಕಾರ ಸಂಘ-9986182809, ಹಿರಿಯೂರು ಟಿ.ಎ.ಪಿ.ಸಿ.ಎಂ.ಸಿ-9611477549, ಲಕ್ಕವ್ವನಹಳ್ಳಿ ಸಹಕಾರ ಸಂಘ-9448697162, ಈಶ ರೈತ ಉತ್ಪಾದಕ ಕೇಂದ್ರ ನಿಯಮಿತ-9513553959. ಹೊಸದುರ್ಗ ತಾಲ್ಲೂಕಿನಲ್ಲಿ ಹೊಸದುರ್ಗ ರಸ್ತೆ ಸಹಕಾರ ಸಂಘ-9483653725, ಹೊಳಲ್ಕೆರೆ ತಾಲೂಕಿನಲ್ಲಿ ರಾಮಗಿರಿ ಸಹಕಾರ ಸಂಘ-9663847812, ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಟಿ.ಎ.ಪಿ.ಸಿ.ಎಂ.ಸಿ ಸಹಕಾರ ಸಂಘ-988645222 ಇಲ್ಲ್ಲಿ ಕಡಲೆ ಕಾಳು ಖರೀದಿ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular