HomeKarnatakaBig Story: ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ!

Big Story: ಬಿವೈ ವಿಜಯೇಂದ್ರ ಕ್ಷೇತ್ರ ಬದಲಾವಣೆ!

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕ್ಷೇತ್ರ ಬದಲಾವಣೆ. ಹೌದು, ಇದು ಸೋಮವಾರ ಸಂಜೆಯ ಬಿಗ್ ಬಿಗ್ ಸ್ಟೋರಿ. ರಾಜ್ಯ ರಾಜಕೀಯದಲ್ಲಿ ಈ ಸುದ್ದಿ ಸಂಚಲನ ಉಂಟು ಮಾಡಿದೆ. ಮೊದಲ ಚುನಾವಣೆಯಲ್ಲಿಯೇ ಶಿಕಾರಿಪುರದಲ್ಲಿ ಗೆದ್ದು ಶಾಸಕರಾಗಿರುವ ವಿಜಯೇಂದ್ರ ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದಾರಾ?.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದರು. ತಾವು ಪ್ರತಿನಿಧಿಸುತ್ತಿದ್ದ ಶಿಕಾರಿಪುರ ಕ್ಷೇತ್ರಕ್ಕೆ ಬಿ.ವೈ.ವಿಜಯೇಂದ್ರ ಅಭ್ಯರ್ಥಿ ಎಂದು ಘೋಷಣೆ ಮಾಡಿದರು.

2023ರ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ 81,810 ಮತಗಳನ್ನು ಪಡೆದು ಮೊದಲ ಬಾರಿಗೆ ಶಾಸಕರಾದರು. ಬಿಜೆಪಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿಯೂ ನೇಮಕ ಮಾಡುವ ಮೂಲಕ ಮಹತ್ವದ ಜವಾಬ್ದಾರಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕ್ಷೇತ್ರ ಬದಲಾವಣೆ: ಈಗ ಬಿ.ವೈ.ವಿಜಯೇಂದ್ರ ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅವರು ಶಿಕಾರಿಪುರ ಬದಲು ಬೆಂಗಳೂರು ನಗರದ ಕ್ಷೇತ್ರ ಅಥವ ತುಮಕೂರಿನಿಂದ ಸ್ಪರ್ಧಿಸಲಿದ್ದಾರೆ ಎಂಬ ವಿಶ್ಲೇಷಿಸಲಾಗುತ್ತಿದೆ.

ವರುಣಾದಲ್ಲಿ ವಿಜಯೇಂದ್ರ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಬಹಳ ಹಿಂದೆ ಕೇಳಿ ಬಂದಿದ್ದವು. ಆದರೆ ಬಿಜೆಪಿ ಹೈಕಮಾಂಡ್ ನಾಯಕರು ಅದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಆದರೆ ಈಗ ಚುನಾವಣೆಗೆ ಎರಡೂವರೆ ವರ್ಷ ಇರುವಾಗ ವಿಜಯೇಂದ್ರ ಕ್ಷೇತ್ರ ಬದಲಾವಣೆ ಚರ್ಚೆ ನಡೆಯುತ್ತಿದೆ.

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, “ವಿಜಯೇಂದ್ರಗೆ ಶಿಕಾರಿಪುರ ಅಲ್ಲಾಡುತ್ತಿದೆ. ವರುಣಾ, ರಾಜಾಜಿನಗರ, ತುಮಕೂರು ಎಲ್ಲಿ ನಿಲ್ಲುವುದು ಅಂತ ಮೊದಲು ತೀರ್ಮಾನ ಮಾಡಲಿ” ಎಂದು ವಾಗ್ದಾಳಿ ನಡೆಸಿದ್ದಾರೆ.

2023ರ ಚುನಾವಣೆಯ ವಿಜಯೇಂದ್ರ ಪಾಲಿಗೆ ಶಿಕಾರಿಪುರದಲ್ಲಿ ಸುಲಭವಾಗಿರಲಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಎಸ್.ಪಿ.ನಾಗರಾಜ್ ಗೌಡ 70,802 ಮತಗಳನ್ನು ಪಡೆದಿದ್ದರು.

ಕಾಂಗ್ರೆಸ್‌ನ ಗೋಣಿ ಮಾಲತೇಶ್ 8,101 ಮತಗಳನ್ನು ಪಡೆದಿದ್ದರು. ಎಸ್.ಪಿ.ನಾಗರಾಜ್ ಗೌಡ ಕಾಂಗ್ರೆಸ್ ಟಿಕೆಟ್ ಸಿಗದೇ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ವಿಜಯೇಂದ್ರಗೆ ಭಾರೀ ಪೈಪೋಟಿ ನೀಡಿದ್ದರು.

ಶಿಕಾರಿಪುರದ ರಾಜಕೀಯ ಚಿತ್ರಣ ಈಗ ಬದಲಾಗಿದೆ. 2028ರ ಚುನಾವಣೆ ಚರ್ಚೆಗಳು ಪ್ರಾರಂಭವಾಗಿದೆ. ಎಸ್.ಪಿ.ನಾಗರಾಜ್ ಗೌಡ ಕ್ಷೇತ್ರದಲ್ಲಿ ಏನು ಮಾಡಲಿದ್ದಾರೆ? ಎಂಬ ಕುರಿತು ಚರ್ಚೆಗಳು ಜೋರಾಗಿ ಸಾಗಿವೆ.

ಬಿಜೆಪಿಯ ರಾಜ್ಯಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ಬೆಂಗಳೂರು ಅಥವ ಬೆಂಗಳೂರು ಸುತ್ತಮುತ್ತಲಿನ ಕ್ಷೇತ್ರದಲ್ಲಿ ಕಣಕ್ಕಿಳಿದರೆ ಪಕ್ಷ ಸಂಘಟನೆಗೆ ಅನುಕೂಲವಾಗಲಿದೆ ಎಂಬ ಚರ್ಚೆಗಳು ನಡೆದಿವೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular