ಚಿಕ್ಕಬಳ್ಳಾಪುರ : ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ ಬಳಿ ಇರುವ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದ (Gitam University) ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ.
ಮೃತ ವಿದ್ಯಾರ್ಥಿನಿಯನ್ನು ಬೆಂಗಳೂರಿನ ಸರ್ಜಾಪುರ ಮೂಲದ ನಯನಾ (20) ಎಂದು ಗುರುತಿಸಲಾಗಿದೆ. ಈಕೆ ಗೀತಂ ವಿವಿಯಲ್ಲಿ ಕಂಪ್ಯೂಟರ್ ಸೈನ್ಸ್ ಪದವಿ ವ್ಯಾಸಂಗ ಮಾಡುತ್ತಿದ್ದಳು.ಈ ಘಟನೆಯು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಾಸ್ಟೆಲ್‌ನ 14ನೇ ಮಹಡಿಯಿಂದ ಆಕೆ ಕೆಳಗೆ ಬಿದ್ದಿದ್ದು, ಇದು ಆತ್ಮಹತ್ಯೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಾವಿನ ನಿಖರ ಕಾರಣ ತಿಳಿಯಲು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

