ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬಿಡದಿಯ ಸಮೀಪ ಗೂಡ್ಸ್ ರೈಲು ಹಳೆ ತಪ್ಪಿದ್ದು ಭಾರಿ ದುರಂತ ತಪ್ಪಿದೆ.
ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದೆ. ವಾಹನ ಸಾಗಿಸುತ್ತಿದ್ದ ಗೂಡ್ಸ್ ರೈಲಿನ ಒಂದು ಬೋಗಿ ಹಳಿ ತಪ್ಪಿದೆ. ಕಿಲೋಮೀಟರ್ ವರೆಗೂ ಹಳಿಯ ಕೆಳಗೆ ರೈಲು ಚಲಿಸಿದೆ. ಬಿಡದಿ ರೈಲ್ವೆ ನಿಲ್ದಾಣ ದಾಟಿದ ನಂತರ ಗೂಡ್ಸ್ ರೈಲು ಹಳಿ ತಪ್ಪಿದೆ.
ಇದರಿಂದಾಗಿ ಮೈಸೂರು -ಬೆಂಗಳೂರು ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

