ದಾವಣಗೆರೆ: ಅಗ್ನಿಪಥ್ ಯೋಜನೆಯಡಿ 2027ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ, ಉಡುಪಿ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಏಪ್ರಿಲ್ 1 ರವರೆಗೆ ಆನ್ಲೈನ್ WWW.JOININDINARMY.NIC.IN ರ ಮೂಲಕ ನೋಂದಾಯಿಸಿಕೊಳ್ಳುವುದು ಹಾಗೂ ಆನ್ಲೈನ್ ಪರೀಕ್ಷೆಯು ಜೂನ್ 2026ರಲ್ಲಿ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂರವಾಣಿ ಸಂಖ್ಯೆ- 0824-2458376, 7411497644 ಅಥವಾ WWW.JOININDINARMY.NIC.IN ಎಂಬ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ. ಭಾರತೀಯ ಸೇನೆಯಲ್ಲಿ ಆಯ್ಕೆ ವಿಧಾನವು ‘ನ್ಯಾಯಯುತ ಮತ್ತು ಪಾರದರ್ಶಕ’ವಾಗಿದ್ದು, ಅರ್ಹತೆ ಮತ್ತು ದೈಹಿಕ ಕ್ಷಮತೆ ಮೇರೆಗೆ ಮಾತ್ರ ನಡೆಯುತ್ತದೆ. ಯಾವುದೇ ಹಂತದಲ್ಲಿ ಭಾರತೀಯ ಸೇನೆಯಲ್ಲಿನ ಆಯ್ಕೆ ಪ್ರಕ್ರಿಯೆ ಅಥವಾ ನೇಮಕಾತಿಗಾಗಿ ಯಾರಿಗೂ ಲಂಚ ನೀಡಬಾರದು ಹಾಗೂ ನೇಮಕಾತಿ ಏಜೆಂಟ್ ಗಳಂತೆ ನಟಿಸುವ, ಆಮಿಷ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

