HomeKarnatakaಬೆಂಗಳೂರು ಚಲೋ ಪ್ರತಿಭಟನೆ ಕೈಗೊಂಡ ಸಾರಿಗೆ ನೌಕರರಿಗೆ ಶಾಕ್: ವೇತನ ಕಡಿತ, ಶಿಸ್ತು ಕ್ರಮದ ಎಚ್ಚರಿಕೆ

ಬೆಂಗಳೂರು ಚಲೋ ಪ್ರತಿಭಟನೆ ಕೈಗೊಂಡ ಸಾರಿಗೆ ನೌಕರರಿಗೆ ಶಾಕ್: ವೇತನ ಕಡಿತ, ಶಿಸ್ತು ಕ್ರಮದ ಎಚ್ಚರಿಕೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಸಾರಿಗೆ ನೌಕರರು ಬೆಂಗಳೂರು ಚಲೋ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ನಾಳೆ ಕೆಲಸಕ್ಕೆ ಗೈರಾಗಿ ಬೆಂಗಳೂರು ಚಲೋದಲ್ಲಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ನಾಳೆ ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗುವಂತೆ ಸಾರಿಗೆ ನೌಕರರಿಗೆ ಸರ್ಕಾರ ಸೂಚನೆ ನೀಡಿದೆ. ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಈ ಕುರಿತು ಆದೇಶಿಸಿದ್ದು, ನಾಳೆಯ ಪ್ರತಿಭಟನೆಯಲ್ಲಿ ಭಾಗಿಯಾಗದಂತೆ ನೌಕರರಿಗೆ ಸೂಚನೆ ನೀಡಿದ್ದಾರೆ.

ನಾಳೆ ಕರ್ತವ್ಯಕ್ಕೆ ಗೈರು ಹಾಜರದಲ್ಲಿ ವೇತನ ಕಡಿತಗೊಳಿಸಲಾಗುವುದು. ಗೈರಾಗುವ ನೌಕರರ ಪಟ್ಟಿಯನ್ನು ಘಟಕವಾರು ಸಿದ್ಧಪಡಿಸಿ ಕ್ರಮ ಕೈಗೊಳ್ಳಲಾಗುವುದು. ಕೆಲಸ ಮಾಡದಿದ್ದಾಗ ವೇತನವಿಲ್ಲ ತತ್ವದಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ತವ್ಯಕ್ಕೆ ಅನಧಿಕೃತವಾಗಿ ಗೈರಾಗುವ ನೌಕರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹೈಕೋರ್ಟ್ ನಿರ್ದೇಶನದಂತೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸಾರಿಗೆ ನೌಕರರಿಗೆ ಎಂಡಿ ಅಕ್ರಂ ಪಾಷಾ ಎಚ್ಚರಿಕೆ ನೀಡಿದ್ದಾರೆ.

ಸಾರಿಗೆ ನಿಗಮಗಳ ಅಧಿಕಾರಿಗಳು ಫೆಬ್ರವರಿ 19ರಂದು ಬಸ್ ಗಳ ದೈನಂದಿನ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಬೇಕು. ಅನಿವಾರ್ಯ ಸಂದರ್ಭ ಹೊರತುಪಡಿಸಿ ನೌಕರರಿಗೆ ಯಾವುದೇ ರಜೆ ಮಂಜೂರು ಮಾಡಬಾರದು. ಈ ಸೂಚನೆ ವಾರದ ರಜೆ ಅಥವಾ ದೀರ್ಘಾವಧಿ ರಜೆಯಲ್ಲಿರುವ ನೌಕರರಿಗೆ ಅನ್ವಯಿಸುವುದಿಲ್ಲ. ಅಗತ್ಯವಿದ್ದರೆ ನೌಕರರು ವಾರದ ರಜೆಯನ್ನು ರದ್ದುಪಡಿಸಿ ಕೆಲಸಕ್ಕೆ ನಿಯೋಜಿಸಬೇಕೆಂದು ತಿಳಿಸಿದ್ದಾರೆ.

ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಫೆಬ್ರವರಿ 19ರಂದು ಕೆಲಸಕ್ಕೆ ಗೈರಾಗಿ ಬೆಂಗಳೂರಿನ ಚಲೋದಲ್ಲಿ ಭಾಗಿಯಾಗುವ ಸಾಧ್ಯತೆಯಿದ್ದು, ಇದರಿಂದ ರಾಜ್ಯದಲ್ಲೆಡೆ ಬಸ್ ಸೇವೆಯಲ್ಲಿ ವ್ಯತ್ಯಯವಾಗಬಹುದು. ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಬೆಂಗಳೂರು ಚಲೋ ಹೋರಾಟದಲ್ಲಿ ಭಾಗಿಯಾಗದಂತೆ ಹಾಗೂ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular