HomeAgricultureಕರ್ನಾಟಕ ಬಜೆಟ್ 2026: ರೈತ ಸಂಘದ ಬೇಡಿಕೆಗಳು

ಕರ್ನಾಟಕ ಬಜೆಟ್ 2026: ರೈತ ಸಂಘದ ಬೇಡಿಕೆಗಳು

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 17ರಂದು ಕರ್ನಾಟಕ ಬಜೆಟ್ 2026-27 ಮಂಡಿಸಲಿದ್ದಾರೆ. ಬಜೆಟ್ ಪೂರ್ವಭಾವಿ ಸಭೆಗಳನ್ನು ಅವರು ನಡೆಸುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ರಾಜ್ಯದ ಎಲ್ಲಾ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ರೈತ ಮುಖಂಡರೊಂದಿಗೆ 2026-27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯ ನಡೆಸಲಾಗಿದೆ.

ಈ ಸಭೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಸಚಿವ ಕೆ.ವೆಂಕಟೇಶ್, ಕೃಷಿ ಇಲಾಖೆ ಅಧಿಕಾರಿಗಳು, ಕೃಷಿ ವಿವಿ ಉಪಕುಲಪತಿಗಳು, ಹಣಕಾಸು ಇಲಾಖೆ ಅಧಿಕಾರಿಗಳು, ಪಶಿಸಂಗೋಪನೆ ಇಲಾಖೆಯ ಅಧಿಕಾರಿಗಳು, ವಿವಿಧ ರೈತ ಸಂಘಟನೆಯ ಮುಖಂಡರು ಪಾಲ್ಗೊಂಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರರ ಸಂಘ (ರಿ) ಮುಖ್ಯಮಂತ್ರಿಗಳಿಗೆ ಹಲವಾರು ವಿಚಾರಗಳ ಕುರಿತು ಮನವಿ ಸಲ್ಲಿಕೆ ಮಾಡಿದೆ. ಈ ಕುರಿತು ಪ್ರಕಟಣೆ ಮೂಲಕ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾಹಿತಿ ನೀಡಿದ್ದಾರೆ.‌

ಈ ಪ್ರಕಟಣೆ ರಾಜ್ಯ ಸರ್ಕಾರ ಮಂಡಿಸುವ 2026ರ ರಾಜ್ಯ ಬಜೆಟ್‌ನ ನಿರೀಕ್ಷೆಗಳು ಎಂಬ ವಿಷಯವನ್ನು ಒಳಗೊಂಡಿದೆ.

* ಕಬ್ಬಿನ ಬೆಲೆ ನಿಗದಿ ರೈತರ ಹೊಲದಲ್ಲಿನ ದರ ಎಂದು ನಿಗದಿಪಡಿಸಬೇಕು. ಕಟಾವು ಸಾಗಾಣಿಕೆ ವೆಚ್ಚವನ್ನು ಕಾರ್ಖಾನೆಗಳು ಭರಿಸುವಂತಾಗಬೇಕು.

* ರಾಜ್ಯಾದ್ಯಂತ ಎಲ್ಲಾ ಕೆರೆಗಳ ಹೂಳು ತೆಗೆಸಿ ರೈತರ ಜಮೀನಿಗೆ ಸಾಗಿಸುವುದು.

* ಕಿಸಾನ್ ಸಮ್ಮಾನ್ ಯೋಜನೆ ಪುನಃ ಜಾರಿಗೆ ತಂದು ರೈತರಿಗೆ 10 ಸಾವಿರ ಸಹಾಯ ಧನ ನೀಡುವುದು.

* ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರದ್ದು ಮಾಡುವುದು.

* ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು ಮಾಡುವುದು.

* ಎಪಿಎಂಸಿಗಳಲ್ಲಿ ರೈತರ ಉತ್ಪನ್ನಗಳ ಅಡಮಾನ ಸಾಲ ನೀಡುವ ಯೋಜನೆಗೆ ಹೆಚ್ಚು ಹಣಕಾಸು ನೀಡಿ ಸದೃಢಗೊಳಿಸುವುದು.

* ಕಳಪೆ ಕೀಟನಾಶಕ, ಕಳಪೆ ಬೀಜ, ನಕಲಿ ಗೊಬ್ಬರ, ನರ್ಸರಿ ಸಸಿಗಳು ಮಾರಾಟ ಮಾಡುವವರ ವಿರುದ್ಧ ಕಠಿಣ ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ಬರಬೇಕು.

* ರೈತರ ಎಲ್ಲಾ ಬೆಳೆಗಳಿಗೂ ಬೆಳೆವಿಮೆ ಜಾರಿಗೆ ತರಬೇಕು ಅತಿವೃಷ್ಟಿ, ಮಳೆಹಾನಿ, ಅನಾವೃಷ್ಟಿ, ಪ್ರಕೃತಿ ವಿಕೋಪ ಬೆಳೆ ನಷ್ಟಕ್ಕೆ ವಿಮಾ ಪರಿಹಾರ ಸಿಗುವಂತಾಗಬೇಕು.

* ಬ್ಯಾಂಕುಗಳಲ್ಲಿ ಕೃಷಿ ಸಾಲ ನೀತಿ ಬದಲಾಗಬೇಕು ರೈತರ ಭೂಮಿಯ ಮೌಲ್ಯಕ್ಕೆ 75 ರಷ್ಟು ಸಾಲ ನೀಡುವ ಯೋಜನೆ ಜಾರಿಗೆ ತರಬೇಕು.

* ಕಬ್ಬಿನ ಅಲ್ಪಾವಧಿ ಬೆಳೆ ಸಾಲ 18 ತಿಂಗಳಿಗೆ ವಿಸ್ತರಣೆ ಮಾಡಬೇಕು.

* ಕಬ್ಬಿನಿಂದ ಬರುವ ಸಕ್ಕರೆ ಇಳುವರಿ ಪರೀಕ್ಷೆ ಮಾಡಲು ಪರಿಣಿತ ಅಧಿಕಾರಿಗಳ ಪ್ರತ್ಯೇಕ ತಂಡ ರಚಿಸಬೇಕು.

* ರೈತರ ಮಗನ ಮದುವೆಯಾಗುವ ಹೆಣ್ಣು ಮಗಳಿಗೆ ಸರ್ಕಾರಿ ಕೆಲಸದಲ್ಲಿ ಶೇಕಡ 20ರಷ್ಟು ಮೀಸಲಾತಿ ನೀಡುವ ಯೋಜನೆ ಜಾರಿಗೆ ತರಬೇಕು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular