ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆ.21 ರ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9901914601 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಆಹಾರ ವಾಹಿನಿ ಯೋಜನೆಯಡಿ ಸಹಾಯದನ ಪಡೆಯಲು ಅರ್ಜಿ ಆಹ್ವಾನ
ಶಿವಮೊಗ್ಗ. : ಕರ್ನಾಟಕ ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ ರೂ.3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂದು ಪೋರ್ಟೆಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
ಈ ಯೋಜನೆಯು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಅಲೆಮಾರಿ/ಅರೆಅಲೆಮಾರಿ ಸಮುದಾಯ, ಒಕ್ಕಲಿಗ, ಅಂಬಿಗ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪಜಾತಿ ಸಮುದಾಯಗಳನ್ನು ಹೊರತುಪಡಿಸಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಮಾತ್ರ ಸೇರಿದವರಾಗಿರಬೇಕು.
ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು, ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು.ಕುಟುಂಬದ ವಾರ್ಷಿಕ ವರಮಾನ ರೂ.3.00 ಲಕ್ಷಗಳ ಒಳಗಿರಬೇಕು ಹಾಗೂ ಅರ್ಜಿದಾರರ ವಯಸ್ಸು 21 ರಿಂದ 45 ವರ್ಷ ಒಳಗಿನವರಾಗಿರಬೇಕು. ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವಂತಿಲ್ಲ. ಸರ್ಕಾರದ ವಿವೇಚನಾ ಕೋಟಾ/ನಿಗಮದ ಅಧ್ಯಕ್ಷರು/ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್‌ನಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು.
ಆಸಕ್ತರು ಸೇವಾಸಿಂದು ಪೋರ್ಟೆಲ್ http://sevasindhukarnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್, ಸೇವಾ ಕೇಂದ್ರಗಳಲ್ಲಿ ಮಾ. 06 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ http://kvldcl.karnataka.gov.in ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಟ್ಟಡ, ಬಾಲರಾಜ್ ಅರಸ್ ರಸ್ತೆ, ಕೆ.ಇ.ಬಿ. ಸರ್ಕಲ್ ಹತ್ತಿರ, ಶಿವಮೊಗ್ಗ,ದೂ. ಸಂ:08182-229634ನ್ನು ಸಂಪರ್ಕಿಸುವುದು.

