ಕಲಬುರಗಿ: ಶೌಚಾಲಯದ ಗುಂಡಿ ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಕಲಬುರಗಿಯ ಹೀರಾಪುರ ಬಡಾವಣೆಯ ಮನೆಯಲ್ಲಿ ನಡೆದಿದೆ.
ಮನೆಯ ಮಾಲೀಕ ಶಿವಕುಮಾರ್(52), ರತನ್(60) ಮೃತಪಟ್ಟವರು ಎಂದು ಹೇಳಲಾಗಿದೆ. ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದಿದ್ದಾಗ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

