HomeLatest Newsಟಿ20 ವಿಶ್ವಕಪ್ ಸೂಪರ್ 8 ಸಮರಕ್ಕೆ ವೇದಿಕೆ ಸಿದ್ಧ:ಸೂಪರ್ 8 ಹಂತದ ವೇಳಾಪಟ್ಟಿ ಮತ್ತು ಟೀಮ್...

ಟಿ20 ವಿಶ್ವಕಪ್ ಸೂಪರ್ 8 ಸಮರಕ್ಕೆ ವೇದಿಕೆ ಸಿದ್ಧ:ಸೂಪರ್ 8 ಹಂತದ ವೇಳಾಪಟ್ಟಿ ಮತ್ತು ಟೀಮ್ ಇಂಡಿಯಾ ಪಂದ್ಯಗಳ ವಿವರ ಇಲ್ಲಿದೆ

ಟಿ20 ವಿಶ್ವಕಪ್ 2026ರ ಲೀಗ್ ಹಂತದ ಪಂದ್ಯಗಳು ಇಂದು ಮುಕ್ತಾಯಗೊಳ್ಳಲಿದ್ದು, ಇದೀಗ ಕ್ರಿಕೆಟ್ ಅಭಿಮಾನಿಗಳ ಚಿತ್ತ ಸೂಪರ್ 8 ಹಂತದತ್ತ ನೆಟ್ಟಿದೆ. ಪಾಕಿಸ್ತಾನ ಮತ್ತು ನಮೀಬಿಯಾ ನಡುವಿನ ಪಂದ್ಯದ ನಂತರ ಎಂಟು ಬಲಿಷ್ಠ ತಂಡಗಳು ಮುಂದಿನ ಹಂತಕ್ಕೆ ಅಧಿಕೃತವಾಗಿ ಲಗ್ಗೆ ಇಟ್ಟಿವೆ. ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವು ಟೂರ್ನಿಯಿಂದ ಹೊರಬಿದ್ದಿದ್ದು, ಅವರ ಜಾಗದಲ್ಲಿ ಜಿಂಬಾಬ್ವೆ ಸೂಪರ್ 8 ಪ್ರವೇಶಿಸಿದೆ.

ಈ ಹಂತದಲ್ಲಿ ಎಂಟು ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಗ್ರೂಪ್ 1ರಲ್ಲಿ ಭಾರತ, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆ ತಂಡಗಳಿದ್ದರೆ, ಗ್ರೂಪ್ 2ರಲ್ಲಿ ಪಾಕಿಸ್ತಾನ, ಶ್ರೀಲಂಕಾ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಸ್ಥಾನ ಪಡೆದಿವೆ. ಫೆಬ್ರವರಿ 21ರಿಂದ ಈ ರೋಚಕ ಪಂದ್ಯಗಳು ಆರಂಭವಾಗಲಿವೆ.

ಟೀಮ್ ಇಂಡಿಯಾದ ಪಂದ್ಯಗಳ ವಿವರ: ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಫೆಬ್ರವರಿ 22ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಎರಡನೇ ಪಂದ್ಯವು ಫೆಬ್ರವರಿ 26ರಂದು ಚೆನ್ನೈನಲ್ಲಿ ಜಿಂಬಾಬ್ವೆ ವಿರುದ್ಧ ನಡೆಯಲಿದ್ದು, ಮಾರ್ಚ್ 1ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ತನ್ನ ಕೊನೆಯ ಸೂಪರ್ 8 ಪಂದ್ಯವನ್ನು ಆಡಲಿದೆ. ಭಾರತದ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೂಪರ್ 8ರ ಪ್ರತಿ ಗುಂಪಿನಲ್ಲಿ ಅಗ್ರ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ. ಮಾರ್ಚ್ 4 ಮತ್ತು 5 ರಂದು ಸೆಮಿಫೈನಲ್ ಪಂದ್ಯಗಳು ನಡೆಯಲಿದ್ದು, ಮಾರ್ಚ್ 8ರಂದು ಫೈನಲ್ ಹಣಾಹಣಿ ನಡೆಯಲಿದೆ. ವಿಶೇಷವೆಂದರೆ, ಈ ಬಾರಿ ಸೂಪರ್ 8 ಹಂತಕ್ಕೆ ಅರ್ಹತೆ ಪಡೆದ ಎಲ್ಲಾ ತಂಡಗಳು 2028ರಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ನೇರ ಅರ್ಹತೆಯನ್ನು ಗಿಟ್ಟಿಸಿಕೊಂಡಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular