HomeIndiaBREAKING: ದೆಹಲಿಯ ಮೂರು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

BREAKING: ದೆಹಲಿಯ ಮೂರು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಮುಂದುವರೆದಿದೆ. ಇಂದು ಕೂಡ ದೆಹಲಿಯ ಮೂರು ಶಾಲೆಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ.

ದೆಹಲಿಯ ಸಿಆರ್ ಪಿಎಫ್ ಪಬ್ಲಿಕ್ ಶಾಲೆ, ಸೆಂಟ್ ಥಾಮಸ್ ಸ್ಕೂಲ್, ಡಿಎವಿ ಪಬ್ಲಿಕ್ ಸ್ಕೂಲ್ ಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ಬಾಂಬ್ ಬೆದರಿಕೆಯಿಂದಾಗಿ ವಿದ್ಯಾರ್ಥಿಗಳು, ಶಿಕ್ಷಕರು ಆತಂಕಕ್ಕೀಡಾಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಶಾಲೆಗಳಿಗೆ ಪೊಲೀಸರು ದೌಡಾಯಿಸಿದ್ದಾರೆ. ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯದಳಗಳಿಂದ ಶಾಲೆಗಳಲ್ಲಿ ಶೋಧ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular