ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿದ್ದು, ಇತ್ತೀಚಿನ ದಿನಗಳಲ್ಲಿ ಭಾರಿ ಪ್ರಮಾಣದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಇದೀಗ ಮತ್ತೊಂದು ಪ್ರಕರಣದಲ್ಲಿ ಎನ್ ಸಿಬಿ ಅಧಿಕಾರಿಗಳು ಬರೋಬ್ಬರಿ 23.8 ಕೋಟಿ ಮೌಲ್ಯದ ಕೊಕೇನ್ ಜಪ್ತಿ ಮಾಡಿದ್ದಾರೆ.
ಬ್ರೆಜಿಲ್ ನಿಂದ ಕೆಂಪೇಗೌಡ ಏರ್ ಪೋರ್ಟ್ ಗೆ ಬಂದಿಳಿದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಆತನ ಬ್ಯಾಗ್ ನಲ್ಲಿ ಬರೋಬ್ಬರಿ 23.8 ಕೋಟಿ ಮೌಲ್ಯದ 4.776 ಕೆಜಿ ಕೊಕೇನ್ ಪತ್ತೆಯಾಗಿದೆ. ತಕ್ಷಣ ಅವುಗಳನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಯಾಣಿಕನನ್ನು ಬಂಧಿಸಲಾಗಿದೆ.
ಖಚಿತ ಮಾಹಿತಿ ಆಧರಿಸಿ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬ್ರೆಜಿಲ್ ನಿಂದ ಬೆಂಗಳೂರಿಗೆ ಅಕ್ರಮವಾಗಿ ಮಾದಕ ವಸ್ತು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

