HomeIndiaಚುನಾವಣೆ ಹೊತ್ತಿನಲ್ಲೇ ತಮಿಳುನಾಡಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ

ಚುನಾವಣೆ ಹೊತ್ತಿನಲ್ಲೇ ತಮಿಳುನಾಡಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ

ತಮಿಳುನಾಡು ವಿಧಾನಸಭಾ ಚುನಾವಣೆ 2026ಕ್ಕೂ ಮುನ್ನ ಮಹತ್ವದ ಬೆಳವಣಿಗೆ ನಡೆದಿದೆ. ರಾಜ್ಯದ 234 ಸ್ಥಾನಗಳಿಗೆ ಮಾರ್ಚ್ ಅಂತ್ಯ ಅಥವ ಏಪ್ರಿಲ್‌ನಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದ ಹಾಲಿ ಆಡಳಿತ ಪಕ್ಷ ಡಿಎಂಕೆ. ಎಂ.ಕೆ.ಸ್ಟಾಲಿನ್ ಮುಖ್ಯಮಂತ್ರಿ.

ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ನಟ ದಿ. ವಿಜಯಕಾಂತ್ ಸ್ಥಾಪನೆ ಮಾಡಿದ್ದ ಡಿಎಂಡಿಕೆ ಪಕ್ಷವು ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ (ಎಸ್‌ಪಿಎ) ಸೇರ್ಪಡೆಗೊಂಡಿದೆ.

ಇದೇ ಮೊದಲ ಬಾರಿಗೆ ಡಿಎಂಡಿಕೆ ಪಕ್ಷವು ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಸೇರಿದೆ. ಅಚ್ಚರಿಯ ಸಂಗತಿ ಎಂದರೆ 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಎಐಎಡಿಎಂಕೆ ಮೈತ್ರಿಕೂಟಕ್ಕೆ ಸೇರಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಭೇಟಿ ಮಾಡಿದ ಡಿಎಂಡಿಕೆ ಪಕ್ಷದ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಮುಂದಿನ ಚುನಾವಣೆಯಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟದ ಭಾಗವಾಗುವುದಾಗಿ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟ (ಎಸ್‌ಪಿಎ)ದಲ್ಲಿ ಕಾಂಗ್ರೆಸ್ ಪಕ್ಷ ಸಹ ಇದೆ. ಡಿಎಂಡಿಕೆ ಸೀಟು ಹಂಚಿಕೆ ಕುರಿತು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡಲಿದೆ ಎಂದು ಪ್ರೇಮಲತಾ ವಿಜಯಕಾಂತ್ ಹೇಳಿದ್ದಾರೆ.

ಪಕ್ಷದ ಕುರಿತು: ಡಿಎಂಡಿಕೆ (ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ) ತಮಿಳುನಾಡು ರಾಜ್ಯದ ಒಂದು ಪ್ರಾದೇಶಿಕ ರಾಜಕೀಯ ಪಕ್ಷ. ಖ್ಯಾತ ತಮಿಳು ನಟ ವಿಜಯಕಾಂತ್ ಸೆಪ್ಟೆಂಬರ್ 14, 2005ರಂದು ಮಧುರೈನಲ್ಲಿ ಪಕ್ಷವನ್ನು ಸ್ಥಾಪಿಸಿದರು.

‘ದ್ರಾವಿಡ’ ಸಿದ್ಧಾಂತವನ್ನು ಆಧರಿಸಿದ ಪಕ್ಷವಿದು. ಸಾಮಾಜಿಕ ನ್ಯಾಯ ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಇದು ಒತ್ತು ನೀಡುತ್ತದೆ. ಈ ಪಕ್ಷದ ಚುನಾವಣಾ ಚಿಹ್ನೆ ‘ನಗಾರಿ’ಯಾಗಿದೆ. ವಿಜಯಕಾಂತ್ ನಿಧನದ ಬಳಿಕ ಪಕ್ಷದ ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿತ್ತು.

ಡಿಎಂಡಿಕೆ ಪಕ್ಷ 2021ರ ಚುನಾವಣೆಯಲ್ಲಿ ಟಿಟಿವಿ ದಿನಕರನ್ ಅವರ ಎಎಂಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಬಳಿಕ 2024ರ ಲೋಕಸಭೆ ಚುನಾವಣೆ ಸಮಯದಲ್ಲಿ ಎಐಎಡಿಎಂಕೆ ಜೊತೆ ಇತ್ತು.

“ನಮ್ಮ ಪಕ್ಷದ ಕಾರ್ಯಕರ್ತರು ಸಹ ಈ ಮೈತ್ರಿಯನ್ನು ಬಯಸಿದ್ದರು. ಕ್ಯಾಪ್ಟನ್ ವಿಜಯಕಾಂತ್ ಬದುಕಿದ್ದಾಗಲೇ ಈ ಮೈತ್ರಿ ಏರ್ಪಡಬೇಕಿತ್ತು” ಎಂದು ಪ್ರೇಮಲತಾ ವಿಜಯಕಾಂತ್ ಹೇಳಿದ್ದಾರೆ.

“ರಾಜ್ಯ ಚುನಾವಣೆಯ ಸೀಟು ಹಂಚಿಕೆ ಒಪ್ಪಂದದ ಮಾತುಕತೆಗಳ ವಿಚಾರದಲ್ಲಿ ಎರಡೂ ಪಕ್ಷಗಳು ತಮ್ಮ ಚುನಾವಣಾ ಸಮಿತಿಗಳನ್ನು ರಚಿಸಿದ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಿವೆ” ಎಂದು ಪ್ರೇಮಲತಾ ವಿಜಯಕಾಂತ್ ತಿಳಿಸಿದ್ದಾರೆ.

ದ್ರಾವಿಡ ಮುನ್ನೇಟ್ರಾ ಕಳಗಂ (ಡಿಎಂಕೆ) ಹೊರತುಪಡಿಸಿ ಜಾತ್ಯತೀತ ಪ್ರಗತಿಪರ ಮೈತ್ರಿಕೂಟದಲ್ಲಿ ಕಾಂಗ್ರೆಸ್, ಭಾರತೀಯ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ (CPI-M) ಭಾರತೀಯ ಕಮ್ಯುನಿಸ್ಟ್ ಪಕ್ಷ (CPI) ಮತ್ತು ವಿಡುದಲೈ ಚಿರುತ್ತೈಗಳ್ ಕಚ್ಚಿ (VCK) ಪಕ್ಷಗಳಿವೆ.

ತಮಿಳುನಾಡು ರಾಜಕೀಯದಲ್ಲಿ ಮೈತ್ರಿಪಕ್ಷಗಳ ಜೊತೆ ಸೀಟು ಹಂಚಿಕೆ ಮಾಡಿಕೊಳ್ಳಲಾಗುತ್ತದೆ. ಆದರೆ ಅಧಿಕಾರ ಹಂಚಿಕೆ ಸೂತ್ರವಿಲ್ಲ. ಈಗ ಕಾಂಗ್ರೆಸ್ ಚುನಾವಣೆಯಲ್ಲಿ ಸೀಟು ಹಂಚಿಕೆ ಜೊತೆ ಅಧಿಕಾರ ಹಂಚಿಕೆ ಸೂತ್ರವನ್ನು ಮುಂದಿಟ್ಟಿದ್ದು, ಡಿಎಂಕೆ ಅದನ್ನು ತಳ್ಳಿ ಹಾಕಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular