ಮಂಗಳೂರು: ಮಂಗಳೂರು ಬಿಎಸ್ಎನ್ಎಲ್ ಕಚೇರಿಯಲ್ಲಿ ಲಕ್ಷಾಂತರ ರೂ. ಮೌಲ್ಯದ ಕೇಬಲ್ ಕಳವು ಮಾಡಲಾಗಿದೆ.
ಬಿಎಸ್ಎನ್ಎಲ್ ಅಧಿಕಾರಿಗಳಿಂದಲೇ ಲಕ್ಷಾಂತರ ರೂಪಾಯಿ ಮೌಲ್ಯದ ಕೇಬಲ್ ಕಳ್ಳತನ ನಡೆದಿದೆ. 70 ಲಕ್ಷ ರೂಪಾಯಿ ಮೌಲ್ಯದ ಕಾಪರ್ ಕೇಬಲ್ ಅನ್ನು ಅಧಿಕಾರಿಗಳು ಲಪಟಾಯಿಸಿದ್ದಾರೆ. ಮಂಗಳೂರಿನ ಪಾಂಡೇಶ್ವರದ ಬಿಎಸ್ಎನ್ಎಲ್ ಕಚೇರಿಯಲ್ಲಿ ಘಟನೆ ನಡೆದಿದೆ.
ಮಂಗಳೂರು ದಕ್ಷಿಣ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಿಎಸ್ಎನ್ಎಲ್ ಸಹಾಯಕ ಆಫೀಸ್ ಸೂಪರಿಂಟೆಂಡೆಂಟ್ ತನ್ವೀರ್ ಬಾಷಾ(50), ಟೆಲಿಕಾಂ ಟೆಕ್ನಿಷಿಯನ್ ಕೆ.ಕೆ. ಚಾಮಿ(59) ಹಾಗೂ ಎಲ್ ಅಂಡ್ ಟಿ ಕಂಪನಿಯ ಕೇಬಲ್ ಜಾಯಿಂಟರ್ ಡಿ. ಮಂಜುನಾಥ್ ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ 2.5 ಲಕ್ಷ ರೂ. ಮೌಲ್ಯದ ಕಾಪರ್ ಕೇಬಲ್ ಮತ್ತು 10 ಲಕ್ಷ ರೂಪಾಯಿ ವಶಕ್ಕೆ ಪಡೆಯಲಾಗಿದೆ.

