ದೇಶದ ಪ್ರತಿಷ್ಠಿತ ಸಾರ್ವಜನಿಕ ವಲಯದ ಸಂಸ್ಥೆಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL), ತನ್ನ ಗುಜರಾತ್ ರಿಫೈನರಿ ಯುನಿಟ್‌ನಲ್ಲಿ ಖಾಲಿ ಇರುವ 609 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.
ಹುದ್ದೆಗಳ ಬಗ್ಗೆ ಇಲ್ಲಿದೆ ಮಾಹಿತಿ
ಒಟ್ಟು ಹುದ್ದೆಗಳು: 609
ವಿಭಾಗಗಳು: ಕೆಮಿಕಲ್ ಪ್ಲಾಂಟ್ ಫಿಟ್ಟರ್, ಕೆಮಿಕಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಇನ್‌ಸ್ಟ್ರುಮೆಂಟೇಶನ್, ಸೆಕ್ರೆಟೇರಿಯಲ್ ಅಸಿಸ್ಟೆಂಟ್, ಅಕೌಂಟೆಂಟ್ ಮತ್ತು ಇತರ ವಿಭಾಗಗಳು.
ಶೈಕ್ಷಣಿಕ ಅರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿತ ವಿಷಯದಲ್ಲಿ ಕನಿಷ್ಠ 50% ಅಂಕಗಳೊಂದಿಗೆ B.E / B.Tech / MBA / CA ಉತ್ತೀರ್ಣರಾಗಿರಬೇಕು.
ವಯೋಮಿತಿ: 31.01.2026ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 24 ವರ್ಷ ವಯಸ್ಸಿನವರಾಗಿರಬೇಕು (ಮೀಸಲಾತಿ ವರ್ಗದವರಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ).
ಆಯ್ಕೆ ವಿಧಾನ: ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯಲ್ಲಿ ಪಡೆದ ಮೆರಿಟ್ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಅಗತ್ಯವಿದ್ದಲ್ಲಿ ದಾಖಲಾತಿ ಪರಿಶೀಲನೆ ನಡೆಸಲಾಗುತ್ತದೆ.
ಪ್ರಮುಖ ದಿನಾಂಕಗಳು:
- ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ: ಫೆಬ್ರವರಿ 07, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 20, 2026
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಐಒಸಿಎಲ್ ಅಧಿಕೃತ ವೆಬ್‌ಸೈಟ್ iocl.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

