HomeKarnatakaBIG NEWS: ಮಹಿಳಾ ಎಫ್ ಡಿಎ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್: ಸಾಕು ಮಗ,...

BIG NEWS: ಮಹಿಳಾ ಎಫ್ ಡಿಎ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್: ಸಾಕು ಮಗ, ಸಹೋದರಿಯಿಂದಲೇ ಕೃತ್ಯ

ತುಮಕೂರು: ತುರುವೇಕೆರೆ ತಾಲೂಕಿನ ಬಿಇಒ ಕಚೇರಿಯಲ್ಲಿ ಎಫ್​​ಡಿಎ ಆಗಿ ಕೆಲಸ ಮಾಡುತಿದ್ದ ಮಹಿಳೆ ಕೊಲೆ ಕೇಸ್ ಗೆ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯ ಆಕೆಯ ಸಾಕು ಮಗ ಮತ್ತು ಸಹೋದರಿಯೇ ಕೊಲೆ ಮಾಡಿರುವುದು ಬಹಿರಂಗವಾಗಿದೆ.

ತುಮಕೂರುನಚಿಕ್ಕನಾಯಕನಹಳ್ಳಿಯ ಜೋಗಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಜಯಲಕ್ಷ್ಮೀ ಮೃತ ಮಹಿಳೆ. ಅನುಸೂಯಾ ಮತ್ತು ಚಂದ್ರಶೇಖರ್ ಎಂಬವರು ಮಹಿಳೆಯನ್ನು ಕೊಲೆಗೈದಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಜಯಲಕ್ಷ್ಮೀ ಹೃದಯಾಘಾತದಿಂದ ಮೃತಪಟ್ಟಿರೋದಾಗಿ ಎಲ್ಲರನ್ನೂ ನಂಬಿಸಿದ್ದ ಆರೋಪಿಗಳ ಬಂಡವಾಳ ಪೊಲೀಸ್​​ ತನಿಖೆ ವೇಳೆ ಬಯಲಾಗಿದೆ. ಜಯಲಕ್ಷ್ಮೀ ಸಾವಿನ ಬಗ್ಗೆ ಅನುಮಾನಗೊಂಡ ಶ್ರೀನಿವಾಸ್ ಎಂಬಾತ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಆಧಾರದ ಮೇಲೆ ತನಿಖೆಗಿಳಿದ ಪೊಲೀಸರು, ಅಂತ್ಯಕ್ರಿಯೆಗೆ ಸಿದ್ಧಗೊಂಡಿದ್ದ ಶವವನ್ನು ಮರಣೊತ್ತರ ಪರಿಕ್ಷೆಗೆ ರವಾನೆ ಮಾಡಿದ್ದಾರೆ. ಬಳಿಕ ಆಕೆಯ ಜೊತೆ ವಾಸವಿದ್ದ ಸಾಕು ಮಗ ಚಂದ್ರಶೇಖರ್ ಹಾಗೂ ತಂಗಿ ಅನುಸೂಯಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಇವರೇ ತಡರಾತ್ರಿ ಜಯಲಕ್ಷ್ಮೀ ಉಸಿರುಗಟ್ಟಿಸಿ ಕೊಂದಿರುವುದು ಬೆಳಿಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಯಲಕ್ಷ್ಮೀ ಸಾವಿನ ಬಗ್ಗೆ ಅನುಮಾನಗೊಂಡು ದೂರು ನೀಡಿದ್ದ ಶ್ರೀನಿವಾಸ್ ಅಸಲಿಗೆ ಆಕೆಯ ಗೆಳಯ ಎಂಬುದು ಗೊತ್ತಾಗಿದೆ. ಪೊಲೀಸ್ ಮಾಹಿತಿ ಪ್ರಕಾರ ಗಂಡನ ಕಳೆದುಕೊಂಡಿದ್ದ ಜಯಲಕ್ಷ್ಮೀಗೆ ಕಳೆದ 20 ವರ್ಷಗಳ ಹಿಂದೆ ಶ್ರೀನಿವಾಸ್ ಪರಿಚಯವಾಗಿತ್ತು. ಜಯಲಕ್ಷ್ಮೀ ಮಕ್ಕಳಿಲ್ಲದ ಕಾರಣಕ್ಕೆ ಈಕೆ ತನ್ನ ಸಹೋದರಿ ಅನುಸೂಯಾ ಮಗ ಚಂದ್ರಶೇಖರ್​​ನ ದತ್ತು ಪಡೆದುಕೊಂಡು ಸಾಕಿಕೊಂಡಿದ್ದಳು. ಇನ್ನು ತುಮಕೂರಿನಲ್ಲಿ ವಾಸವಾಗಿದ್ದ ಅನುಸೂಯಾ ಹಾಗೂ ಚಂದ್ರಶೇಖರ್ ಕಳೆದ ಎಂಟು ತಿಂಗಳ ಹಿಂದೆ ಚಿಕ್ಕನಾಯಕನಹಳ್ಳಿಯ ಜೋಗಿಹಳ್ಳಿಯ ಜಯಲಕ್ಷ್ಮೀ ನಿವಾಸಕ್ಕೆ ಬಂದಿದ್ದರು. ಈ ವೇಳೆ ಶ್ರೀನಿವಾಸ್​​ಗೆ ಒತ್ತಡ ಹಾಕಿ ಆತ ಮನೆ ಬಿಡುವಂತೆ ಮಾಡಿದ್ದರು.

ಬಳಿಕ ಜಯಲಕ್ಷ್ಮೀ ತುರುವೆಕೆರೆಯಲ್ಲಿ ಮನೆ ಮಾಡಲು ನಿರ್ಧರಿಸಿದ್ದು, ಅದರಂತೆ ಬಾಡಿಗೆ ಮನೆಗೆ ಅಡ್ವಾನ್ಸ್ ಕೂಡ ಕೊಟ್ಟಿದ್ದರು. ಈಕೆ ಮನೆ ತೊರೆಯುತ್ತಿರುವ ವಿಚಾರ ತಿಳಿದ ಅನುಸೂಯಾ ಮತ್ತು ಚಂದ್ರಶೇಖರ್ ಉಸಿರುಗಟ್ಟಿಸಿ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದೆ. ಕೊಲೆ ಪ್ರಕರಣ ದಾಖಲಿಸಿರುವ ಪೊಲೀಸರು, ವಿಚಾರಣೆ ಮುಂದುವರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular