HomeKarnatakaದಾವಣಗೆರೆ ದಕ್ಷಿಣ ಉಪ ಚುನಾವಣೆ ಟಿಕೆಟ್: ಇಬ್ಬರು ಸಚಿವರ ನಡುವೆ ಜಟಾಪಟಿ!

ದಾವಣಗೆರೆ ದಕ್ಷಿಣ ಉಪ ಚುನಾವಣೆ ಟಿಕೆಟ್: ಇಬ್ಬರು ಸಚಿವರ ನಡುವೆ ಜಟಾಪಟಿ!

ಶಾಮನೂರು ಶಿವಶಂಕರಪ್ಪ ನಿಧನದ ಕಾರಣಕ್ಕೆ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಎದುರಾಗಿದೆ. ಮಾರ್ಚ್‌ನಲ್ಲಿ ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಲಿದೆ. ಕಾಂಗ್ರೆಸ್ ಭದ್ರಕೋಟೆಯನ್ನು ಉಳಿಸಿಕೊಳ್ಳಲು ಉಪ ಚುನಾವಣೆ ಟಿಕೆಟ್‌ಗಾಗಿ ಭಾರೀ ಪೈಪೋಟಿ ನಡೆಯುತ್ತಿದೆ.

2008ರಿಂದ 4 ಬಾರಿ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣದಲ್ಲಿ ಗೆಲುವ ಸಾಧಿಸಿದ್ದಾರೆ. ಆದರೆ ಉಪ ಚುನಾವಣೆ ಟಿಕೆಟ್ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಸಿಗಲಿದೆಯೇ? ಎಂಬುದು ಸದ್ಯದ ಪ್ರಶ್ನೆ.

ಕ್ಷೇತ್ರದಲ್ಲಿ 80,000 ಮುಸ್ಲಿಂ ಮತಗಳಿವೆ. ಆದ್ದರಿಂದ ಉಪ ಚುನಾವಣೆ ಟಿಕೆಟ್ ಮುಸ್ಲಿಂ ಸಮುದಾಯಕ್ಕೆ ನೀಡಬೇಕು ಎಂಬ ಒತ್ತಡ ಜೋರಾಗಿದೆ. ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದರೆ ಪಕ್ಷೇತರ ಅಭ್ಯರ್ಥಿ ಕಣಕ್ಕಿಳಿಸುವ ಕುರಿತು ಮುಸ್ಲಿಂ ಮುಖಂಡರು ಚರ್ಚೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಮನೂರು ಶಿವಶಂಕರಪ್ಪ ಕುಟುಂಬದಲ್ಲಿ ಇಬ್ಬರು ಸಚಿವರು, ಒಬ್ಬರು ಸಂಸದರು ಇದ್ದಾರೆ. ಆದ್ದರಿಂದ ದಾವಣಗೆರೆ ದಕ್ಷಿಣದ ಟಿಕೆಟ್‌ ಮುಸ್ಲಿಂಮರಿಗೆ ಕೊಡಿ ಎಂಬುದು ಬೇಡಿಕೆಯಾಗಿದೆ. ಈ ಬಗ್ಗೆ ಸ್ಥಳೀಯ ಮುಸ್ಲಿಂ ಮುಖಂಡರು ಸಚಿವ ಜಮೀರ್ ಅಹ್ಮದ್ ಖಾನ್ ಬೆನ್ನು ಬಿದ್ದಿದ್ದಾರೆ.

ಸಚಿವರ ಜಟಾಪಟಿ; ಸದ್ಯದ ಮಾಹಿತಿ ಪ್ರಕಾರ ದಾವಣಗೆರೆ ದಕ್ಷಿಣ ಉಪ ಚುನಾವಣೆ ಕಾಂಗ್ರೆಸ್‌ ಟಿಕೆಟ್‌ಗಾಗಿ ಸಿದ್ದರಾಮಯ್ಯ  ಸಂಪುಟದ ಇಬ್ಬರು ಸಚಿವರ ನಡುವೆ ಜಟಾಪಟಿ ನಡೆಯುತ್ತಿದೆ.

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಟಿಕೆಟ್‌ಗಾಗಿ ಪಟ್ಟು ಹಿಡಿದಿದ್ದಾರೆ. ಎಸ್.ಎಸ್.ಮಲ್ಲಿಕಾರ್ಜುನ ತಮ್ಮ ಪುತ್ರ ಸಮರ್ಥ ಶಾಮನೂರುಗೆ ಟಿಕೆಟ್ ಕೊಡಿಸುವ ಪ್ರಯತ್ನದಲ್ಲಿದ್ದಾರೆ. ಕ್ಷೇತ್ರ ಕುಟುಂಬದ ಕೈತಪ್ಪಬಾರದು ಎಂಬುದು ಅವರ ಲೆಕ್ಕಾಚಾರವಾಗಿದೆ.

ಕೆಲವು ದಿನಗಳ ಹಿಂದೆ ದಾವಣಗೆರೆಗೆ ಸಚಿವ ಜಮೀರ್ ಅಹ್ಮದ್ ಖಾನ್​ ಆಗಮಿಸಿದ್ದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಅವರನ್ನು ಭೇಟಿಯಾಗಿ, ಈ ಬಾರಿ ತಮ್ಮ ಸಮುದಾಯದ ಮುಖಂಡರಿಗೆ ಟಿಕೆಟ್ ನೀಡಲು ಹೈಕಮಾಂಡ್​ ಮೇಲೆ ಒತ್ತಡ ಹಾಕಬೇಕು ಎಂದು ಮನವಿ ಸಲ್ಲಿಸಿದ್ದಾರೆ.

ಶಾಮನೂರು ಶಿವಶಂಕರಪ್ಪ 2023ರ ಚುನಾವಣೆ ಸಮಯದಲ್ಲಿ ಮುಂದೆ ಕ್ಷೇತ್ರದ ಟಿಕೆಟ್ ಮುಸ್ಲಿಂ ಸಮುದಾಯಕ್ಕೆ ಕೊಡುವುದಾಗಿ ಹೇಳಿದ್ದಾರೆ. ಅದರ ವಿಡಿಯೋವನ್ನು ಸಚಿವ ಜಮೀರ್‌ ಅಹ್ಮದ್ ಖಾನ್‌ಗೆ ತೋರಿಸಿ, ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದಾರೆ.

ಎಸ್‌.ಎಸ್.ಮಲ್ಲಿಕಾರ್ಜುನ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದು, ಎರಡು ಸಚಿವ ಸಂಪುಟ ಸಭೆಗೆ ಗೈರಾಗಿದ್ದರು. ಪುತ್ರನಿಗೆ ಟಿಕೆಟ್ ಸಿಕ್ಕಿಲ್ಲ ಎಂದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿರುವುದು ಕಾಂಗ್ರೆಸ್‌ ಪಕ್ಷಕ್ಕೆ ತಲೆ ನೋವು ತಂದಿದೆ.

ಕಾಂಗ್ರೆಸ್​​ ಪಕ್ಷದಲ್ಲಿ ಸೈಯದ್ ಸೈಫುಲ್ಲಾ, ಅವರ ಪುತ್ರ ರಾಷ್ಟ್ರೀಯ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್, ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಹಾಗೂ ಅಯೂಬ್ ಪೈಲ್ವಾನ್ ಇನ್ನಿತರರು ಟಿಕೆಟ್​​ ಆಕಾಂಕ್ಷಿಗಳು.

ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಇದುವರೆಗೂ ಗೆದ್ದಿಲ್ಲ. ಶಾಮನೂರು ಶಿವಶಂಕರಪ್ಪ ಅನುಪಸ್ಥಿತಿಯಲ್ಲಿ ನಡೆಯುವ ಚುನಾವಣೆಯಲ್ಲಿ ಗೆಲ್ಲುವ ಉತ್ಸಾಹದಲ್ಲಿ ಪಕ್ಷವಿದೆ. ಆದರೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಸಹ ಅಂತಿಮವಾಗಿಲ್ಲ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular