HomeKarnatakaBIG UPDATE: ಸಿಸಿಬಿ ಪೊಲೀಸರಿಂದ ಸ್ನೇಹಮಯಿ ಕೃಷ್ಣ ಅರೆಸ್ಟ್

BIG UPDATE: ಸಿಸಿಬಿ ಪೊಲೀಸರಿಂದ ಸ್ನೇಹಮಯಿ ಕೃಷ್ಣ ಅರೆಸ್ಟ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿ ಸಿಸಿಬಿ ಪೊಲೀಸರು ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಕರೆದೊಯಲಾಗಿತ್ತು. ಶಾಂತಿನಗರದ ಸಿಸಿಬಿ ಕಚೇರಿಯಲ್ಲಿ ಸ್ನೇಹಮಯಿ ಕೃಷ್ಣ ಅವರನ್ನು ವಿಚಾರಣೆಗೆ ಒಳಪಡಿಸಸಿದ ಬಳಿಕ ಅವರನ್ನು ಬಂಧಿಸಲಾಗಿದೆ.

ಸ್ನೇಹಮಯಿ ಕೃಷ್ಣ, ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಮುಂಬಡ್ತಿ ಪಡೆಯಲು ನಟೇಶ್ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ಕೋಟ್ಯಂತರ ರೂಪಾಯಿ ಲಂಚ ನೀಡಿದ್ದಾರೆ ಎಂದು ಆರೋಪಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತನ್ನ ವಿರುದ್ಧ ಸ್ನೇಹಮಯಿ ಕೃಷ್ಣ ಆಧಾರರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ. ಕಾನೂನು ಕ್ರಮ ಕೈಗೊಳ್ಳುವಂತೆ ನಟೇಶ್, ಸ್ನೇಹಮಯಿ ಕೃಷ್ಣ ವಿರುದ್ಧ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಸಿಬಿ ಪೊಲೀಸರು ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಿದ್ದಾರೆ.

ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ಮುಂಬಡ್ತಿಗಾಗಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ 1.60 ಕೋಟಿ ಲಂಚ ನೀಡಿದ್ದಾರೆ. ಕಾರಿನಲ್ಲಿ ಲಂಚದ ಹಣ ಬಂದಿದ್ದು, ಈ ಬಗ್ಗೆ ತನ್ನ ಬಳಿ ದಾಖಲೆಗಳಿವೆ ಎಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದರು.

ಇನ್ನೊಂದೆಡೆ ಮೈಸೂರಿನ ಗೌರಿ ಶಂಕರನಗರದಲ್ಲಿರುವ ಸ್ನೇಹಮಯಿ ಕೃಷ್ಣ ನಿವಾಸ ಹಾಗೂ ಕಚೇರಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular