HomeLatest NewsSHOCKING NEWS: ಮೆಟ್ರೋ ರೈಲಿಗೆ ಹಾರಿ ಬಾಲಕ ಆತ್ಮಹತ್ಯೆ

SHOCKING NEWS: ಮೆಟ್ರೋ ರೈಲಿಗೆ ಹಾರಿ ಬಾಲಕ ಆತ್ಮಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಘೋರ ಘಟನೆ ನಡೆದಿದೆ. ಮೆಟ್ರೋ ರೈಲಿಗೆ ಹಾರಿ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

ಇಂದು ಬೆಳಗ್ಗೆ ಪಶ್ಚಿಮ ದೆಹಲಿಯ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ಬಾಲಕ ಮೆಟ್ರೋ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬೆಳಗ್ಗೆ 11.7ಕ್ಕೆ ನಿಲ್ದಾಣ ನಿಯಂತ್ರಕರಿಂದ ವ್ಯಕ್ತಿಯೊಬ್ಬ ಹಳಿಗಳ ಮೇಲೆ ಹಾರಿದ ಬಗ್ಗೆ ಮಾಹಿತಿ ಬಂದಿತ್ತು. ದ್ವಾರಕಾ ಕಡೆಯಿಂದ ಬರುತ್ತಿದ್ದ ಮೆಟ್ರೋ ರೈಲು ಆತನ ಮೇಲೆ ಹರಿದಿದೆ. ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಪೊಲೀಸರು ಬರುವ ಮೊದಲೇ ಮೃತದೇಹವನ್ನು ಹಳಿಗಳಿಂದ ತೆಗೆಯಲಾಗಿದೆ. ವೈಯಕ್ತಿಕ ಸಮಸ್ಯೆಗಳಿಂದ ಬೇಸತ್ತು ಬಾಲಕ ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಬಾಲಕ ನಜಾಫ್‌ಗಢ ನಿವಾಸಿಯಾಗಿದ್ದು, 12ನೇ ತರಗತಿ ಪೂರ್ಣಗೊಳಿಸಿದ್ದು, ಉತ್ತಮ್ ನಗರದ ಖಾಸಗಿ ಸಂಸ್ಥೆಯಲ್ಲಿ ಕೋಚಿಂಗ್ ತರಗತಿಗಳಿಗೆ ಹಾಜರಾಗುತ್ತಿದ್ದ. ಹೆಚ್ಚಿನ ಅಧ್ಯಯನಕ್ಕೆ ತಯಾರಿ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯಿಂದಾಗಿ ನೀಲಿ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಸಹ ಸ್ವಲ್ಪ ಸಮಯದವರೆಗೆ ಸ್ಥಗಿತಗೊಂಡಿದ್ದವು.

ವೈಯಕ್ತಿಕ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ತಂದೆ ಡಿಟಿಸಿಯಲ್ಲಿ ಗುತ್ತಿಗೆ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ, ಪೋಷಕರಿಗೆ ಆತನೊಬ್ಬನೇ ಆ ಎಂದು ಡಿಸಿಪಿ ಮೆಟ್ರೋ ಕುಶಾಲ್ ಪಾಲ್ ಸಿಂಗ್ ಹೇಳಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ರವಾನಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 194 ರ ಅಡಿಯಲ್ಲಿ ತನಿಖಾ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular