HomeKarnatakaBIG NEWS: ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ: ಸಿದ್ಧರಾಮಯ್ಯ

BIG NEWS: ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ: ಸಿದ್ಧರಾಮಯ್ಯ

ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ. ಕುರಿಕಾಯುತ್ತಾ ಇರಬೇಕಾದವನು ಮುಖ್ಯಮಂತ್ರಿ ಆಗಿ ಬಿಟ್ಟನಲ್ಲಾ, ಆರ್ಥಿಕ ತಜ್ಞರಿಗೆ ಸರಿಸಮನಾಗಿ ನಿಂತು ಸಾಲುಸಾಲು ಬಜೆಟ್ ಮಂಡಿಸಿ ಶಹಬ್ಬಾಸ್ ಗಿರಿ ಗಳಿಸುತ್ತಿದ್ದಾನಲ್ಲಾ ಎನ್ನುವ ಅಸಹನೆ, ಅವರೊಳಗೆ ದ್ವೇಷ, ಅಸೂಯೆ ಕುದಿಯುತ್ತಿದೆ. ಇವನೊಬ್ಬನನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಅದರ ನಂತರ ನಮ್ಮೆಲ್ಲರ ಹಾದಿ ಸುಲಭವಾಗುತ್ತದೆ ಎನ್ನುವ ರಾಜಕೀಯ ದುರುದ್ದೇಶದ ಲೆಕ್ಕಾಚಾರ ಇವರ ಮನಸ್ಸಿನಲ್ಲಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಬದಲಾವಣೆಗೆ ಕೈ ಹಾಕಿದವರೆಲ್ಲರ ವಿರುದ್ಧ ಇಂತಹ ಷಡ್ಯಂತ್ರಗಳು ನಡೆದಿರುವುದನ್ನು ಇತಿಹಾಸದ ಪುಟದಲ್ಲಿ ಕಾಣಬಹುದು. ಬುದ್ಧ, ಬಸವಣ್ಣ, ಅಂಬೇಡ್ಕರ್, ಗಾಂಧೀಜಿ, ಪೆರಿಯಾರ್, ನಾರಾಯಣ ಗುರು, ಕನಕದಾಸರಾದಿಯಾಗಿ ಸಾಮಾಜಿಕ ಪರಿವರ್ತನೆಗೆ ಹೋರಾಟ ನಡೆಸಿದವರೆಲ್ಲರನ್ನು ಹಣಿಯುವ, ದಮನಿಸುವ, ಮುಗಿಸುವ ಸಂಚು-ಒಳಸಂಚುಗಳು ನಡೆಯುತ್ತಲೇ ಬಂದಿದೆ. ಬಸವಣ್ಣ ಏನು ತಪ್ಪು ಮಾಡಿದ್ದರು? ಜಾತಿ ವಿನಾಶಕ್ಕೆ ಪ್ರಯತ್ನ ಮಾಡಿದ್ದರು, ಅಂತರಜಾತಿ ಮದುವೆ ಮಾಡಿಸಿದ್ದರು, ಅವಕಾಶ ವಂಚಿತ ತಬ್ಬಲಿ ಜಾತಿಗಳಿಗೆ ಸ್ವಾಭಿಮಾನದ ದೀಕ್ಷೆ ಕೊಟ್ಟು ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಸುವ ಪ್ರಯತ್ನ ಮಾಡಿದ್ದರು. ಈ ಕಾರಣಕ್ಕಾಗಿ ಅವರನ್ನು ವ್ಯವಸ್ಥಿತ ಸಂಚಿನ ಮೂಲಕ ಮುಗಿಸಲಾಯಿತು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
https://twitter.com/siddaramaiah/status/2024838871847158198

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular