ಬೆಂಗಳೂರು: ಚಿತ್ರ ನಿರ್ಮಾಪಕ ಸಾ.ರಾ. ಗೋವಿಂದು ಅವರ ಮೊಬೈಲ್ ಹ್ಯಾಕ್ ಮಾಡಿ ಅವರ ಆಪ್ತರಿಂದ ಹಣ ವಸೂಲಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಬಸವೇಶ್ವರನಗರ ಪೊಲೀಸ್ ಠಾಣೆಗೆ ಸಾ.ರಾ. ಗೋವಿಂದು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಕಳೆದ ಮೂರು ನಾಲ್ಕು ದಿನಗಳಿಂದ ಗೋವಿಂದು ಅವರ ಹೆಸರಿನಲ್ಲಿ ಅವರ ಆಪ್ತರು ಮತ್ತು ಕುಟುಂಬ ಸದಸ್ಯರಿಗೆ ತುರ್ತು ಹಣ ಬೇಕಿದೆ ಎನ್ನುವ ಸಂದೇಶ ಕಳುಹಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿ ಗೋವಿಂದು ಅವರ ಆಪ್ತರು 40,000 ರೂ. ಹಣ ಕೊಟ್ಟಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಸಾ.ರಾ. ಗೋವಿಂದು ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ.

