HomeEntertainment'ಕಾಮಿಡಿ ಕಿಲಾಡಿಗಳು' ಶೋನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ: ನಟ ಜಗ್ಗೇಶ್, ನಟಿ ತಾರಾ ವಿಚಾರಣೆಗೆ...

‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ: ನಟ ಜಗ್ಗೇಶ್, ನಟಿ ತಾರಾ ವಿಚಾರಣೆಗೆ ನೋಟಿಸ್

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು’ ಶೋ ಸಂಚಿಕೆಯೊಂದರಲ್ಲಿ ಮಹಾಭಾರತದ ಪಾತ್ರಗಳು ಮತ್ತು ಹಿಂದೂ ದೇವತೆಗಳನ್ನು ಅಪಹಾಸ್ಯ ಮಾಡಿದ ಆರೋಪ ಕೇಳಿ ಬಂದಿದೆ. ಆರೋಪಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮದ ತೀರ್ಪುಗಾರರನ್ನು ಕೂಡ ತನಿಖೆಗೆ ಒಳಪಡಿಸಲು ಪೊಲೀಸರು ಬಯಸುತ್ತಿದ್ದಾರೆ ಎಂದು ಜೀ ಎಂಟರ್ಪ್ರೈಸಸ್ ಹೈಕೋರ್ಟ್ ಗೆ ದೂರು ನೀಡಿದೆ.

ಪ್ರಕರಣ ಸಂಬಂಧ ಜೀ ಪ್ರತಿನಿಧಿ ದೀಪಕ್ ಶ್ರೀರಾಮುಲು ಮತ್ತು ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ನಿರ್ದೇಶಕ ಕೆ. ಅನಿಲ್ ಕುಮಾರ್ ಸಲ್ಲಿಸಿದ ಕ್ರಿಮಿನಲ್ ಅರ್ಜಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.

ಪ್ರಕರಣದ ತನಿಖೆಗೆ ಅರ್ಜಿದಾರರು ಹಾಜರಾಗಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಕಾರ್ಯಕ್ರಮದ ತೀರ್ಪುಗಾರರಾದ ನಟ ಜಗ್ಗೇಶ್, ನಟಿ ತಾರಾ ಹಾಗೂ ಮತ್ತೊಬ್ಬ ಸೆಲೆಬ್ರಿಟಿಯನ್ನು ತನಿಖೆಗೆ ಹಾಜರಾಗುವಂತೆ ಬಯಸಿದ್ದಾರೆ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠದ ಗಮನಕ್ಕೆ ತಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗ ಸರ್ಕಾರದ ಪರ ವಕೀಲರನ್ನು ಉದ್ದೇಶಿಸಿ ಪ್ರತಿಕ್ರಿಸಿದ ನ್ಯಾಯಪೀಠ, ತೀರ್ಪುಗಾರರನ್ನು ಏಕೆ ಕರೆಸಬೇಕು? ಅವರಿಗೆ ಏಕೆ ತೊಂದರೆ ಕೊಡುತ್ತಿರಿ ಎಂದು ಪ್ರಶ್ನಿಸಿದೆ. ಹಾಗೆಯೇ ತೀರ್ಪುಗಾರರಿಗೆ ಪೊಲೀಸರು ನೀಡಿರುವ ಸಮನ್ಸ್ ಪ್ರತಿ ಎಲ್ಲಿ ಎಂದು ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular