HomeKarnatakaಹಕ್ಕಿ ಜ್ವರ: ಕೊಪ್ಪಳ ಜಿಲ್ಲೆಯಲ್ಲಿ ಹೈ ಅಲರ್ಟ್‌ ಘೋಷಣೆ

ಹಕ್ಕಿ ಜ್ವರ: ಕೊಪ್ಪಳ ಜಿಲ್ಲೆಯಲ್ಲಿ ಹೈ ಅಲರ್ಟ್‌ ಘೋಷಣೆ

“ಪಕ್ಕದ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಕೋಳಿ ಶೀತ ಜ್ವರ (ಹಕ್ಕಿ ಜ್ವರ) ಪ್ರಕರಣ ಧೃಡಪಟ್ಟಿರುವ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ. ಕೋಳಿ ಫಾರಂ ಮಾಲೀಕರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ” ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಂಜಾಗ್ರತೆ ವಹಿಸುವ ಕುರಿತು ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ತುರ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, “ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 25 ಮೊಟ್ಟೆ ಉತ್ಪಾದನಾ ಕೋಳಿ ಫಾರಂಗಳು ಹಾಗೂ 14 ಮಾಂಸ ಉತ್ಪಾದನಾ ಕೋಳಿ ಫಾರಂಗಳು ಕಾರ್ಯನಿರ್ವಹಿಸುತ್ತಿದ್ದು, ಕೋಳಿ ಶೀತ ಜ್ವರ ಹರಡುವಿಕೆ ತಡೆಯಲು ತೀವ್ರ ನಿಗಾವಹಿಸುವುದು ಅತ್ಯಗತ್ಯವಾಗಿದೆ” ಎಂದರು.

“ಪಕ್ಕದ ರಾಜ್ಯದಲ್ಲಿ ರೋಗ ಕಂಡುಬಂದಿರುವುದರಿಂದ, ಜಿಲ್ಲೆಯ ಪಶುವೈದ್ಯಕೀಯ ಇಲಾಖೆ, ಸ್ಥಳೀಯ ಸಂಸ್ಥೆಗಳು ಹಾಗೂ ಕೋಳಿ ಫಾರಂ ಮಾಲೀಕರು ಪೂರ್ಣ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು” ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೂಚನೆಗಳು

  • ಕೋಳಿಗಳ ಅಸಹಜ ಸಾವು ಕಂಡುಬಂದರೆ ತಕ್ಷಣವೇ ಹತ್ತಿರದ ಪಶುವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು.
  • ರೋಗಪೀಡಿತ ಕೋಳಿಗಳನ್ನು ಆರೋಗ್ಯಕರ ಕೋಳಿಗಳಿಂದ ಬೇರ್ಪಡಿಸುವುದು ಮತ್ತು ಸತ್ತ ಕೋಳಿಗಳನ್ನು ಸುರಕ್ಷಿತವಾಗಿ ಹೂತು ಹಾಕುವುದು.
  • ಜನವಸತಿ ಪ್ರದೇಶದಿಂದ ಕೋಳಿ ಫಾರಂಗಳನ್ನು ದೂರವಿಡುವುದು ಹಾಗೂ ಜನರು ಕೋಳಿ ಮತ್ತು ಅದರ ಉತ್ಪನ್ನಗಳನ್ನು ಮುಟ್ಟಿದ ನಂತರ ಸಾಬೂನಿನಿಂದ ಕೈ ತೊಳೆಯುವುದು.
  • ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು ಕನಿಷ್ಠ 70 ಡಿಗ್ರಿ ಸೆಂಟಿಗ್ರೇಡ್ ಉಷ್ಣಾಂಶದಲ್ಲಿ ಹತ್ತು ನಿಮಿಷಗಳ ಕಾಲ ಚೆನ್ನಾಗಿ ಬೇಯಿಸಿ ಸೇವಿಸುವುದು.
  • ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೊಳಗಾಗದೆ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ.

ಫಾರಂ ಮಾಲೀಕರಿಗೆ ಸೂಚನೆ: ಕೋಳಿ ಫಾರಂ ಮಾಲೀಕರಿಗೆ ವಿಶೇಷ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, “ಕೋಳಿಗಳಲ್ಲಿ ರೋಗ ಲಕ್ಷಣಗಳು ಕಂಡುಬಂದರೆ ಅಥವಾ ಹೆಚ್ಚಿನ ಸಂಖ್ಯೆಯಲ್ಲಿ ಸಾವಿನ ಪ್ರಕರಣಗಳು ಸಂಭವಿಸಿದರೆ ತಕ್ಷಣವೇ ಪಶುವೈದ್ಯ ಇಲಾಖೆಗೆ ಮಾಹಿತಿ ನೀಡಬೇಕು. ಫಾರಂ ಪ್ರದೇಶಕ್ಕೆ ವಲಸೆ ಪಕ್ಷಿಗಳು ಪ್ರವೇಶಿಸದಂತೆ ಕ್ರಮ ಕೈಗೊಳ್ಳಬೇಕು ಮತ್ತು ಫಾರಂ ಕೆಲಸಗಾರರಲ್ಲಿ ರೋಗದ ಬಗ್ಗೆ ಅರಿವು ಮೂಡಿಸಬೇಕು” ಎಂದು ಹೇಳಿದರು.

“ಗ್ರಾಮಗಳಲ್ಲಿ ಕೋಳಿಗಳು ಅಥವಾ ವಲಸೆ ಪಕ್ಷಿಗಳು ಅಸಹಜವಾಗಿ ಸತ್ತರೆ ತಕ್ಷಣವೇ ಪಶುವೈದ್ಯ ಇಲಾಖೆಗೆ ಮಾಹಿತಿ ನೀಡಬೇಕು. ಕೆರೆ, ಕಟ್ಟೆ, ನದಿ ಹಾಗೂ ನೀರಿನ ತೊರೆಗಳಲ್ಲಿ ಸತ್ತ ಪಕ್ಷಿಗಳು ಕಂಡುಬಂದರೆ ಕೂಡಲೇ ವರದಿ ಮಾಡಬೇಕು. ಗ್ರಾಮ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ಈ ಬಗ್ಗೆ ಜಾಗೃತರಾಗಿದ್ದು, ರೋಗ ನಿಯಂತ್ರಣಕ್ಕೆ ಸಹಕರಿಸಬೇಕು” ಎಂದು ಕರೆ ಕೊಟ್ಟರು.

“ಹಕ್ಕಿ ಜ್ವರ ಅನುಮಾನ ಉಂಟಾದಲ್ಲಿ 24 ಗಂಟೆಗಳೊಳಗೆ ಪಶುವೈದ್ಯರ ತಂಡಗಳನ್ನು ರಚಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಗತ್ಯವಿದ್ದಲ್ಲಿ ಹಿಕ್ಕೆ, ರಕ್ತ ಹಾಗೂ ಸತ್ತ ಕೋಳಿಗಳ ಮಾದರಿಗಳನ್ನು ಸಂಗ್ರಹಿಸಿ ಭೋಪಾಲ್‌ನ ರಾಷ್ಟ್ರೀಯ ಉನ್ನತ ಭದ್ರತಾ ಪ್ರಾಣಿ ರೋಗ ಸಂಶೋಧನಾ ಸಂಸ್ಥೆಗೆ ಕಳುಹಿಸಿ ಪರೀಕ್ಷೆ ನಡೆಸಲಾಗುವುದು” ಎಂದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular