HomeLive Newsಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೇ ಇಲಾಖೆಯಲ್ಲಿ 11,127 ಹುದ್ದೆಗಳ ನೇಮಕಾತಿಗೆ ಅನುಮೋದನೆ.!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೇ ಇಲಾಖೆಯಲ್ಲಿ 11,127 ಹುದ್ದೆಗಳ ನೇಮಕಾತಿಗೆ ಅನುಮೋದನೆ.!

ರೈಲ್ವೆ ಇಲಾಖೆಯಲ್ಲಿ ವೃತ್ತಿಜೀವನ ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಯುವಜನತೆಗೆ ಕೇಂದ್ರ ಸರ್ಕಾರವು ಬಂಪರ್ ಕೊಡುಗೆ ನೀಡಿದೆ. ದೇಶಾದ್ಯಂತ ರೈಲುಗಳ ಸುರಕ್ಷಿತ ಸಂಚಾರದಲ್ಲಿ ಪ್ರಮುಖ ಪಾತ್ರ ವಹಿಸುವ 11,127 ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಕೃತವಾಗಿ ಅನುಮೋದನೆ ದೊರೆತಿದೆ. ವಿಶೇಷವಾಗಿ ದಕ್ಷಿಣ ಮಧ್ಯ ರೈಲ್ವೆ ವಲಯದಲ್ಲಿ ನೂರಾರು ಅವಕಾಶಗಳಿದ್ದು, ಐಟಿಐ, ಡಿಪ್ಲೊಮಾ ಮತ್ತು ಇಂಜಿನಿಯರಿಂಗ್ ಪದವೀಧರರಿಗೆ ಈ ಫೆಬ್ರವರಿ ಅಂತ್ಯದೊಳಗೆ ರೈಲ್ವೆ ಇಲಾಖೆಯು ಸುವರ್ಣ ಅವಕಾಶದ ಬಾಗಿಲು ತೆರೆಯಲಿದೆ.

 ಒಟ್ಟು ಖಾಲಿ ಹುದ್ದೆಗಳು: 11,127 ಪೋಸ್ಟ್‌ಗಳು.

ದಕ್ಷಿಣ ಮಧ್ಯ ರೈಲ್ವೆ ಈ ವಲಯದಲ್ಲಿ 674 ಹುದ್ದೆಗಳನ್ನು ಮೀಸಲಿಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿಸೂಚನೆ: ಈ ಫೆಬ್ರವರಿ ತಿಂಗಳ ಅಂತ್ಯದೊಳಗೆ ಪೂರ್ಣ ಪ್ರಮಾಣದ ಅಧಿಕೃತ ಅಧಿಸೂಚನೆ ಹೊರಬರುವ ಸಾಧ್ಯತೆಯಿದೆ.

ಅರ್ಹತೆಗಳು (Eligibility):

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು:

  • ವಿದ್ಯಾರ್ಹತೆ: * ಹತ್ತನೇ ತರಗತಿ (10th/SSLC) ಉತ್ತೀರ್ಣರಾಗಿರಬೇಕು.
    • ಜೊತೆಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ನಿರ್ದಿಷ್ಟ ಟ್ರೇಡ್‌ಗಳಲ್ಲಿ ITI ಪೂರ್ಣಗೊಳಿಸಿರಬೇಕು.
    • ಅಥವಾ ಮೆಕಾನಿಕಲ್/ ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್/ ಆಟೋಮೊಬೈಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಅಥವಾ ಬಿ.ಟೆಕ್ (B.E/B.Tech) ಮಾಡಿದವರೂ ಸಹ ಅರ್ಹರು.
  • ವಯೋಮಿತಿ: 18 ರಿಂದ 30 ವರ್ಷಗಳ ಒಳಗಿರಬೇಕು.
    • (ಸರ್ಕಾರಿ ನಿಯಮದಂತೆ SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ).

ಆಯ್ಕೆ ಪ್ರಕ್ರಿಯೆ(Selection Process):

ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗೆ ಆಯ್ಕೆಯಾಗಲು ಅಭ್ಯರ್ಥಿಗಳು ಐದು ಹಂತದ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ:

  1. CBT-1 (ಕಂಪ್ಯೂಟರ್ ಆಧಾರಿತ ಪರೀಕ್ಷೆ-1): ಇದು ಕೇವಲ ಅರ್ಹತಾ ಪರೀಕ್ಷೆಯಾಗಿದೆ. ಇದರಲ್ಲಿ ತೇರ್ಗಡೆಯಾದವರನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ.
  2. CBT-2 (ಕಂಪ್ಯೂಟರ್ ಆಧಾರಿತ ಪರೀಕ್ಷೆ-2): ಇದು ಅತ್ಯಂತ ನಿರ್ಣಾಯಕ ಹಂತ. ಇದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಲಾಗುತ್ತದೆ. ಇದು ಪಾರ್ಟ್-ಎ ಮತ್ತು ಪಾರ್ಟ್-ಬಿ ಎಂಬ ಎರಡು ಭಾಗಗಳನ್ನು ಒಳಗೊಂಡಿರುತ್ತದೆ.
  3. CBAT (ಸೈಕೋ ಟೆಸ್ಟ್): ಲೋಕೋ ಪೈಲಟ್‌ಗೆ ಇರಬೇಕಾದ ಏಕಾಗ್ರತೆ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಇಲ್ಲಿ ಪರೀಕ್ಷಿಸಲಾಗುತ್ತದೆ.
  4. ದಾಖಲೆಗಳ ಪರಿಶೀಲನೆ (DV): ಅಭ್ಯರ್ಥಿಯ ಶೈಕ್ಷಣಿಕ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ.
  5. ವೈದ್ಯಕೀಯ ಪರೀಕ್ಷೆ: ರೈಲ್ವೆ ನಿಯಮಗಳ ಪ್ರಕಾರ ಕಣ್ಣಿನ ದೃಷ್ಟಿ (A-1 ಮೆಡಿಕಲ್ ಸ್ಟ್ಯಾಂಡರ್ಡ್) ಅತ್ಯಂತ ಕಟ್ಟುನಿಟ್ಟಾಗಿರಬೇಕು.

ಅಭ್ಯರ್ಥಿಗಳು ಕಾಲಕಾಲಕ್ಕೆ ಹೊಸ ಅಪ್‌ಡೇಟ್‌ಗಳನ್ನು ಪಡೆಯಲು ಮತ್ತು ಅರ್ಜಿ ಸಲ್ಲಿಸಲು ರೈಲ್ವೆಯ ಅಧಿಕೃತ ವೆಬ್‌ಸೈಟ್ https://indianrailways.gov.in/ ಗೆ ಭೇಟಿ ನೀಡಬಹುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular