HomeLatest NewsBIG NEWS: ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ವಿರೋಧಿಗಳಿಗೆ ಸಿಎಂ ಸಿದ್ದರಾಮಯ್ಯ ಟಾಂಗ್

BIG NEWS: ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ವಿರೋಧಿಗಳಿಗೆ ಸಿಎಂ ಸಿದ್ದರಾಮಯ್ಯ ಟಾಂಗ್

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ ಎಂದು ವಿರೋಧಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ, ಅದು ಕಲ್ಲು – ಮುಳ್ಳುಗಳ ಹಾದಿಯಾಗಿತ್ತು. ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ಅವುಗಳನ್ನೆಲ್ಲವನ್ನೂ ಜನತೆಯ ಆಶೀರ್ವಾದದಿಂದ ಗೆದ್ದು ಬಂದಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ಸಿದದ್ರಾಮಯ್ಯ ಬರೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದು ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಲ್ಲ, ಇದು ನನ್ನನ್ನು ನಂಬಿರುವ, ಪ್ರೀತಿಸುತ್ತಿರುವ, ನನಗೆ ನಿರಂತರವಾಗಿ ಆಶೀರ್ವಾದ ನೀಡಿ ಬೆಂಬಲಿಸುತ್ತಿರುವ ನಿಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಎನ್ನುವುದು ನನಗೆ ಚೆನ್ನಾಗಿ ಗೊತ್ತು. ಆದ್ದರಿಂದ ನನ್ನ ಉಸಿರು ಇರುವ ವರೆಗೆ ಈ ರಾಜಕೀಯ ಷಡ್ಯಂತ್ರ, ದ್ವೇಷ-ಅಸೂಯೆಯ ರಾಜಕಾರಣದ ವಿರುದ್ಧ ಹೋರಾಡುತ್ತೇನೆ. ಇದು ಸತ್ಯ, ನ್ಯಾಯ ಮತ್ತು ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟ. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಹೋರಾಟವನ್ನು ನನ್ನ ಉಸಿರು ಇರುವ ವರೆಗೆ ನಡೆಸುತ್ತೇನೆ, ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular