HomeKarnatakaBig News: ಕರ್ನಾಟಕ ಬಜೆಟ್ 2026, ಸರ್ಕಾರಿ ನೌಕರರ ಬೇಡಿಕೆಗಳು

Big News: ಕರ್ನಾಟಕ ಬಜೆಟ್ 2026, ಸರ್ಕಾರಿ ನೌಕರರ ಬೇಡಿಕೆಗಳು

ಕರ್ನಾಟಕ ಬಜೆಟ್ 2026ರ ತಯಾರಿ ಹೊತ್ತಿನಲ್ಲಿಯೇ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ನೇತೃತ್ವದ ನಿಯೋಗ ಹಣಕಾಸು ಸಚಿವ, ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದೆ.

ಮಾರ್ಚ್‌ 6ರಂದು ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಈ ವರ್ಷದ ಬಜೆಟ್‌ನಲ್ಲಿ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಮನವಿ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಸರ್ಕಾರಿ ನೌಕರರಿಗೆ ಯಾವ ಗಿಫ್ಟ್ ನೀಡಲಿದೆ? ಎಂದು ಕಾದು ನೋಡಬೇಕಿದೆ.

ಸಿ.ಎಸ್.ಷಡಾಕ್ಷರಿ ನೇತೃತ್ವದ ನಿಯೋಗ ಸಲ್ಲಿಕೆ ಮಾಡಿರುವ ಮನವಿ 2025-26ನೇ ಸಾಲಿಗೆ ಸಂಬಂಧಿಸಿದಂತೆ, ಬಿಲ್ಲುಗಳನ್ನು ಖಜಾನೆಗಳಲ್ಲಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕವನ್ನು ವಿಸ್ತರಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವಿಷಯಕ್ಕೆ ಸಂಬಂಧಿಸಿದಂತೆ 2025-26ನೇ ಸಾಲಿಗೆ ಸಂಬಂಧಿಸಿದಂತೆ ವೇತನ/ ವೇತನ ಬಾಕಿ ಬಿಲ್ಲುಗಳು/ ಹಬ್ಬದ ಮುಂಗಡ ಬಿಲ್ಲು ಅನುದಾನಿತ ವೇತನ ಬಿಲ್ಲು/ ಇತರೆ ಅನುದಾನಿತ ಬಿಲ್ಲುಗಳು/ ಕಚೇರಿ ವೆಚ್ಚಗಳಿಗೆ ಸಂಬಂಧಿಸಿದ ಸಾದಿಲ್ವಾರು ಬಿಲ್ಲುಗಳು/ ಪ್ರಯಾಣ ಭತ್ಯೆ ಬಿಲ್ಲುಗಳು/ ZP-TP ವೇತನ/ ವೇತನೇತರ ಮತ್ತು ಅನುದಾನಿತ (ಜಿ.ಐ.ಎ) ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸಲು ದಿನಾಂಕ 16-02-2026ರವರೆಗೆ ಅವಕಾಶ ನೀಡಲಾಗಿದೆ.

ಆದರೆ, ಕೆಲವು ಇಲಾಖೆಗಳಲ್ಲಿ ತಾಂತ್ರಿಕ/ ಆಡಳಿತಾತ್ಮಕ ಕಾರಣಗಳಿಂದಾಗಿ ಮೇಲ್ಕಂಡ ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸಲು ಸಾಧ್ಯವಾಗಿರುವುದಿಲ್ಲ. ಆದ್ದರಿಂದ 2025-26ನೇ ಸಾಲಿಗೆ ಸಂಬಂಧಿಸಿದಂತೆ, ಬಿಲ್ಲುಗಳನ್ನು ಖಜಾನೆಗಳಲ್ಲಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸುವಂತೆ ತಮ್ಮಲ್ಲಿ ಕೋರಿದೆ ಎಂದು ಮನವಿ ಮಾಡಲಾಗಿದೆ.

ಸರ್ಕಾರಿ ನೌಕರರ ಬೇಡಿಕೆಗಳು

  • NPS ರದ್ದುಗೊಳಿಸಿ OPS ಜಾರಿಗೊಳಿಸುವ ಬಗ್ಗೆ  ಬಜೆಟ್‌ನಲ್ಲಿ ಖಾತ್ರಿಗೊಳಿಸುವುದು. ಈ ಯೋಜನೆಯನ್ನು ಜಾರಿಗೆ ತರುವುದರಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ.
  • ಮಿಲಿಟರಿ ಕ್ಯಾಂಟೀನ್ ಮಾದರಿಯಲ್ಲಿ  ಸರ್ಕಾರಿ ನೌಕರರು/ ನಿವೃತ್ತ ನೌಕರರು ಹಾಗೂ ಇತರೆ ಸಂಸ್ಥೆಗಳ ನೌಕರರು ಹಾಗೂ ಕುಟುಂಬದವರಿಗೆ MSIL ಸಂಸ್ಥೆಯ ಮೂಲಕ ಪ್ರತಿ ಜಿಲ್ಲೆಗಳಲ್ಲಿ ನೌಕರರ ಕ್ಯಾಂಟೀನ್ ಪ್ರಾರಂಭಿಸುವುದು.
  • ಉದ್ದೇಶಿತ ಯೋಜನೆಯಲ್ಲಿ ಸರ್ಕಾರಿ ನೌಕರರ ದಿನನಿತ್ಯದ ಬದುಕಿಗೆ ಅವಶ್ಯವಿರುವ ದವಸ-ಧಾನ್ಯಗಳು, ಗೃಹೋಪಯೋಗಿ ವಸ್ತುಗಳು ಹಾಗೂ ಎಫ್.ಎಂ.ಜಿ.ಸಿ. ವಲಯದಲ್ಲಿ ಬರುವ ಪ್ರತಿಯೊಂದು ಪದಾರ್ಥಗಳನ್ನು ರಿಯಾಯಿತಿ ದರದಲ್ಲಿ ಲಭ್ಯಗೊಳಿಸುವುದು.
  • ಬೆಂಗಳೂರು ನಗರದಲ್ಲಿ ನಾಲ್ಕು ಕಡೆಗಳಲ್ಲಿ ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರಿ ನೌಕರರ ಕ್ಯಾಂಟೀನ್‌ಗಳನ್ನು ತೆರೆಯುವುದು.
  • ರೋಬೋಟಿಕ್ ತಂತ್ರಜ್ಞಾನ ಮತ್ತು ಮೊಬೈಲ್ App ತಂತ್ರಾಂಶ ಆಧಾರಿತ ಮಾರುಕಟ್ಟೆ ವ್ಯವಸ್ಥೆಒದಗಿಸುವುದು. ಸರ್ಕಾರಿ ಸ್ವಾಮ್ಯದ ಎಂ.ಎಸ್.ಐ.ಎಲ್. ಸಂಸ್ಥೆಯ ಮುಖಾಂತರ ಈ ಯೋಜನೆಯನ್ನು ಜಾರಿಗೊಳಿಸುವುದರಿಂದ ಸರ್ಕಾರಿ ಸಂಸ್ಥೆಯನ್ನು ಬಲಪಡಿಸಬಹುದಾಗಿದೆ.
  • ಸೇನಾ ಕ್ಯಾಂಟೀನ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ದಿನಬಳಕೆ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಪೂರೈಸಲು ಎಂ.ಎಸ್.ಐ.ಎಲ್. ಸಂಸ್ಥೆಯ ಮೂಲಕ “ಸರ್ಕಾರಿ ನೌಕರರ ಕ್ಯಾಂಟೀನ್” ಪ್ರಾರಂಭಿಸುವ ಯೋಜನೆಯನ್ನು 2026-2027ನೇ ಸಾಲಿನ ರಾಜ್ಯದ ಆಯ-ವ್ಯಯದಲ್ಲಿ ಘೋಷಣೆ ಮಾಡುವುದು.
  • ಸರ್ಕಾರಿ ನೌಕರರ ಮೇಲಿನ ಹಲ್ಲೆಗಳನ್ನು  ತಡೆಗಟ್ಟಲು ಕಠಿಣ ಕಾನೂನು ರೂಪಿಸಿ ಜಾರಿಗೆ ತರುವುದು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular