HomeIndiaಕೇರಳದಲ್ಲಿ ಎಸ್‌ಐಆರ್ ಅಂತ್ಯ: ಒಟ್ಟು ಮತದಾರರು 2.96 ಕೋಟಿ

ಕೇರಳದಲ್ಲಿ ಎಸ್‌ಐಆರ್ ಅಂತ್ಯ: ಒಟ್ಟು ಮತದಾರರು 2.96 ಕೋಟಿ

ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳ ರಾಜ್ಯದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಮುಕ್ತಾಯಗೊಂಡಿದೆ. 140 ಸದಸ್ಯ ಬಲದ ಕೇರಳ ವಿಧಾನಸಭೆಗೆ ಏಪ್ರಿಲ್‌ನಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್‌ನಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದೆ.

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಕೇರಳದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕೈಗೊಳ್ಳಲಾಗಿತ್ತು. ಈಗ ರಾಜ್ಯದಲ್ಲಿ 2.69 ಕೋಟಿ ಮತದಾರರು ಇದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ.

ರಾಜ್ಯದಲ್ಲಿ ಎಸ್‌ಐಆರ್‌ಗೂ ಮೊದಲು ಮತದಾರರ ಪಟ್ಟಿಯಲ್ಲಿ 2.78 ಕೋಟಿ ಮತದಾರರಿದ್ದರು. ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದ್ದ 36.88 ಲಕ್ಷ ಮತದಾರರ ಪೈಕಿ, 53,229 ಮತದಾರರನ್ನು ಅಂತಿಮ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಆಯೋಗ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂತಿಮ ಮತದಾರರ ಪಟ್ಟಿ: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪೂರ್ಣಗೊಂಡ ನಂತರ ಸಿದ್ಧಪಡಿಸಲಾದ ವಿಧಾನಸಭಾ ಚುನಾವಣೆಯ ಅಂತಿಮ ಮತದಾರರ ಪಟ್ಟಿಯು 2.69 ಕೋಟಿ ಮತದಾರರನ್ನು ಹೊಂದಿದೆ. ಇದು ಪರಿಷ್ಕರಣೆಗಿಂತ ಮೊದಲು ಇದ್ದ ಸಂಖ್ಯೆಗಿಂತ ಸುಮಾರು 9 ಲಕ್ಷದಷ್ಟು ಕಡಿಮೆಯಾಗಿದೆ.

ಮೊದಲು ಪಟ್ಟಿಯಲ್ಲಿ 2.78 ಕೋಟಿ ಮತದಾರರಿದ್ದರು. ವಿಚಾರಣೆಗೆ ಕರೆಸಲಾಗಿದ್ದ 36.88 ಲಕ್ಷ ಮತದಾರರ ಪೈಕಿ, 53,229 ಮತದಾರರನ್ನು ಅಂತಿಮ ಪಟ್ಟಿಯಿಂದ ಹೊರಗಿಡಲಾಗಿದೆ. ಅವರು ಮರಣ ಹೊಂದಿದ್ದಾರೆ ಅಥವಾ ವಿದೇಶಿ ಪೌರತ್ವ ಪಡೆದಿದ್ದಾರೆ.

ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ ಅಥವಾ ಅವರ ಹೆಸರುಗಳು ಪಟ್ಟಿಯಲ್ಲಿ ಪುನರಾವರ್ತನೆಯಾಗಿವೆ ಎಂದು ಕಂಡುಬಂದಿದೆ ಎಂದು ಕೇರಳದ ಮುಖ್ಯ ಚುನಾವಣಾ ಅಧಿಕಾರಿ ರತನ್ ಯು. ಕೇಲ್ಕರ್ ತಿಳಿಸಿದ್ದಾರೆ.

ವಿಧಾನಸಭಾ ಚುನಾವಣೆಯ ಅಂತಿಮ ಮತದಾರರ ಪಟ್ಟಿಯು ಡಿಸೆಂಬರ್ 2025ರ ಸ್ಥಳೀಯ ಸಂಸ್ಥೆಗಳ ಮತದಾರರ ಪಟ್ಟಿಗೆ ಹೋಲಿಸಿದರೆ 16.54 ಲಕ್ಷದಷ್ಟು ಕಡಿಮೆ ಮತದಾರರನ್ನು ಹೊಂದಿರಲಿದೆ. ರಾಜ್ಯ ಚುನಾವಣಾ ಆಯೋಗವು ಸ್ಥಳೀಯ ಸಂಸ್ಥೆಗಳ ಚುನಾವಣೆಗಾಗಿ ಸಿದ್ಧಪಡಿಸಿದ್ದ ಪಟ್ಟಿಯಲ್ಲಿ 2.86 ಕೋಟಿ ಮತದಾರರಿದ್ದರು.

ಅಕ್ಟೋಬರ್ 27, 2025 ಮತ್ತು ಜನವರಿ 30, 2026ರ ನಡುವೆ 15.10 ಲಕ್ಷ ಮತದಾರರು ಹೆಸರು ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದರು. ಇವುಗಳಲ್ಲಿ 1.66 ಲಕ್ಷ ಅರ್ಜಿಗಳನ್ನು ತಿರಸ್ಕರಿಸಲಾಗಿದೆ.  ಅರ್ಜಿ ತಿರಸ್ಕೃತಗೊಂಡ 15 ದಿನಗಳ ಒಳಗಾಗಿ ಅರ್ಜಿದಾರರು ಜಿಲ್ಲಾ ಚುನಾವಣಾಧಿಕಾರಿಗೆ (ಜಿಲ್ಲಾಧಿಕಾರಿ) ಮೇಲ್ಮನವಿ ಸಲ್ಲಿಸಬಹುದು. ಜಿಲ್ಲಾ ಚುನಾವಣಾಧಿಕಾರಿಗಳ ನಿರ್ಧಾರದ ವಿರುದ್ಧ 30 ದಿನಗಳ ಒಳಗಾಗಿ ಮುಖ್ಯ ಚುನಾವಣಾಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಲು ಸಹ ಅವಕಾಶವಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular