HomeKarnatakaBig Update: 2028ರ ಚುನಾವಣೆ, ತುಮಕೂರಿನಲ್ಲಿ ನಿಖಿಲ್ ಮಹತ್ವದ ಘೋಷಣೆ

Big Update: 2028ರ ಚುನಾವಣೆ, ತುಮಕೂರಿನಲ್ಲಿ ನಿಖಿಲ್ ಮಹತ್ವದ ಘೋಷಣೆ

2028ರ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.

ಶನಿವಾರ ಅವರು ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ನಾಗವಲ್ಲಿ ಗ್ರಾಮದ ಗ್ರಾಮ ಪಂಚಾಯತಿ ಆವರಣದ ಮುಂಭಾಗ ನಡೆದ ‘ಜನರೊಂದಿಗೆ ಜನತಾದಳ’ ಹಾಗೂ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, “ಜನತಾದಳ ಪಕ್ಷ ಇದು ಜನಸಾಮಾನ್ಯರ ಹಾಗೂ ರೈತರ ಪಕ್ಷ. ಪಕ್ಷದ ಏಳಿಗೆಗಾಗಿ ಹಗಲಿರುಳು ಶ್ರಮಿಸಿ, ಪಕ್ಷದ ಬೆಳ್ಳಿಹಬ್ಬಕ್ಕೆ ಕಾರಣೀಭೂತರಾದ ಸರ್ವರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ತುಮಕೂರು ಜಿಲ್ಲೆಯಲ್ಲಿ ಪಕ್ಷದ ಹಳೆಯ ಗತವೈಭವವನ್ನು ಮರುಕಳಿಸಲು ನಾವೆಲ್ಲರೂ ಸಂಘಟಿತರಾಗಿ ಪಕ್ಷದ ಬಲವರ್ಧನೆಗೆ ಶ್ರಮಿಸಲು ಸಂಕಲ್ಪ ಮಾಡೋಣ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಾಧನೆ ಹಾಗೂ ಕೊಡುಗೆಯನ್ನು ತುಮಕೂರು ಗ್ರಾಮಾಂತರ ಜನತೆಗೆ ತಿಳಿಸಿ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತ ಬಂಧುಗಳ ಗೆಲುವಿಗಾಗಿ ಶ್ರಮಿಸೋಣ” ಎಂದು ಕರೆ ನೀಡಿದರು.

“2028ರ ಚುನಾವಣೆಗೆ ಶ್ರಮಿಸೋಣ. ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಖಂಡಿಸಿ, ರೈತರ ಆತ್ಮಹತ್ಯೆ ಸೇರಿದಂತೆ ವಿವಿಧ ವಿಷಯಗಳ ಕುರಿತು ತಿಳಿಸೋಣ, ಶಿಕ್ಷಕರ ನೇಮಕಾತಿ ಆಗದಿರುವುದರ ಬಗ್ಗೆಯೂ ಜನರ ಗಮನ ಸೆಳೆಯೋಣ” ಎಂದು ಹೇಳಿದರು.

“ಮುಂಬರುವ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ಪಕ್ಷದ ಬೃಹತ್ ಸಮಾವೇಶ ಮಾಡುವ ಮೂಲಕ 2028 ರ ಚುನಾವಣೆಗೆ ದಿಕ್ಸೂಚಿ ಆಗವಂತೆ ಕಾರ್ಯಕ್ರಮ ಮಾಡೋಣ” ಎಂದು ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಪಕ್ಷದ ಹಿರಿಯರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪೇಸ್ವಾಮಿ, ಜಿಲ್ಲಾಧ್ಯಕ್ಷ ನಿಂಗಪ್ಪ, ಮಾಜಿ ಶಾಸಕ ತಿಮ್ಮರಾಯಪ್ಪ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular