HomeKarnatakaSHOCKING: ಆಟವಾಡುವಾಗಲೇ ಘೋರ ದುರಂತ: ಲೂಡೊ ಕಾಯಿನ್ ನುಂಗಿ ಉಸಿರುಗಟ್ಟಿ ಬಾಲಕಿ ಸಾವು

SHOCKING: ಆಟವಾಡುವಾಗಲೇ ಘೋರ ದುರಂತ: ಲೂಡೊ ಕಾಯಿನ್ ನುಂಗಿ ಉಸಿರುಗಟ್ಟಿ ಬಾಲಕಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತೊಕ್ಕಟ್ಟು ಸಮೀಪದ ಕೊಲ್ಯ ಗ್ರಾಮದಲ್ಲಿ ಲೂಡೊ ಕಾಯಿನ್ ನುಂಗಿ ಬಾಲಕಿ ಮೃತಪಟ್ಟಿದ್ದಾಳೆ.

ಸಹೋದರ, ಸಹೋದರಿಯೊಂದಿಗೆ ಮನೆಯಲ್ಲಿ ಲೂಡೊ ಆಡುತ್ತಿದ್ದ ಎಂಟು ವರ್ಷದ ಬಾಲಕಿ ಆಟದಲ್ಲಿ ಬಳಸುವ ಶಂಕು ಆಕಾರದ ಪ್ಲಾಸ್ಟಿಕ್ ಕಾಯಿನ್ ನುಂಗಿದ್ದು ಉಸಿರು ಗಟ್ಟಿ ಮೃತಪಟ್ಟಿದ್ದಾಳೆ. ಮೂಲತಃ ಕಾಸರಗೋಡು ಜಿಲ್ಲೆ ಮಧೂರು ಬಳಿಯ ತಡಕಲ್ ನಿವಾಸಿ ರಾಜೇಶ್ ಶೆಟ್ಟಿ ಮತ್ತು ರಾಜೇಶ್ವರಿ ದಂಪತಿಯ ಪುತ್ರಿ ತನುಷ್ಕಾ(8) ಮೃತಪಟ್ಟ ಬಾಲಕಿ.

ತನುಷ್ಕಾ ಅವರ ತಾಯಿ ಉಳ್ಳಾಲ ಶಾಲೆಯಯೊಂದರಲ್ಲಿ ಶಿಕ್ಷಕಿಯಾಗಿದ್ದಾರೆ. ಅವರು ಕುಟುಂಬ ಸಮೇತ ಕೊಲ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಶನಿವಾರ ಸಂಜೆ ತನ್ನ ಸಹೋದರ, ಸಹೋದರಿಯೊಂದಿಗೆ ಲೂಡೊ ಆಡುತ್ತಿದ್ದ ತನುಷ್ಕಾ ಆಟದ ಪ್ಲಾಸ್ಟಿಕ್ ಕಾಯಿನ್ ನುಂಗಿದ್ದಾಳೆ. ಏಕಾಏಕಿ ಉಸಿರುಗಟ್ಟಿ ಗಂಭೀರ ಸ್ಥಿತಿಗೆ ತಲುಪಿದ ಆಕೆಯನ್ನು ಸ್ಥಳೀಯರ ನೆರವಿನಿಂದ ತಾಯಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಈ ವೇಳೆಗೆ ಬಾಲಕಿ ಮೃತಪಟ್ಟಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮರಣೋತ್ತರ ಪರೀಕ್ಷೆ ವೇಳೆ ಆಕೆಯ ಶ್ವಾಸಕೋಶದಲ್ಲಿ ಪ್ಲಾಸ್ಟಿಕ್ ಕೋನ್ ಕಂಡು ಬಂದಿದೆ. ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular