HomeKarnatakaಸಿಇಟಿಗೆ 3.18 ಲಕ್ಷ ಅಭ್ಯರ್ಥಿಗಳ ನೋಂದಣಿ: ಫೆ. 27ರವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸಿಇಟಿಗೆ 3.18 ಲಕ್ಷ ಅಭ್ಯರ್ಥಿಗಳ ನೋಂದಣಿ: ಫೆ. 27ರವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)  ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲಿದ್ದು, ಇದಕ್ಕೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಮತ್ತೊಮ್ಮೆ ಫೆಬ್ರುವರಿ 27ರವರೆಗೆ ವಿಸ್ತರಿಸಲಾಗಿದೆ.

ಇದು ಕೊನೆಯ ಅವಕಾಶವಾಗಿದ್ದು, ಈ ಅವಧಿ ನಂತರ ಪುನಃ ದಿನಾಂಕ ವಿಸ್ತರಣೆ ಇರುವುದಿಲ್ಲ. ಹೀಗಾಗಿ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.

ಇದುವರೆಗೂ 3.18 ಲಕ್ಷ ಮಂದಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಿದ್ದು, ಇನ್ನೂ ಅನೇಕರು ಫೆ.22ರ ಕೊನೆ ದಿನಾಂಕವನ್ನು ವಿಸ್ತರಿಸುವಂತೆ ಕೋರಿದ್ದಾರೆ, ಆ ಪ್ರಕಾರ ಅರ್ಜಿ ಸಲ್ಲಿಸಲು ಫೆ.27 ಹಾಗೂ ಶುಲ್ಕ ಪಾವತಿಗೆ ಮಾರ್ಚ್ 3ರವರೆಗೆ ಅವಕಾಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಿರುವವರ ಪೈಕಿ 2.18 ಲಕ್ಷ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಸ್ಯಾಟ್ಸ್ ಮೂಲಕ ಆನ್‌ಲೈನ್ ನಲ್ಲಿ ಆಗಿದೆ. ಕಾಲೇಜು ಹಂತದಲ್ಲಿ 1.08 ಲಕ್ಷ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular