ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿ ಗ್ರಾಮದ ಬಳಿ ಹಿಟ್ ಅಂಡ್ ರನ್ ಗೆ ಇಬ್ಬರು ಬಲಿಯಾಗಿದ್ದಾರೆ.
ರಸ್ತೆ ಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಪಟ್ರೆಹಳ್ಳಿ ಗ್ರಾಮದಲ್ಲಿ ಕಾರ್ ಕೆಟ್ಟಿದ್ದರಿಂದ ರಿಪೇರಿಗಾಗಿ ನಾಲ್ವರು ರಸ್ತೆಯ ಬದಿ ನಿಂತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಹಿರಿಯೂರು ಗ್ರಾಮಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

