ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಸೂಪರ್ 8 ಸುತ್ತಿನ ಮೂರನೇ ಪಂದ್ಯ ಇಂದು ( ಫೆಬ್ರವರಿ 22 ) ನಡೆಯುತ್ತಿದ್ದು, ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಏಡೆನ್ ಮಾರ್ಕ್ರಮ್ ಬ್ಯಾಟಿಂಗ್ ಆರಿಸಿಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ತಂಡದಲ್ಲಿ ಕೆಲ ಬದಲಾವಣೆಗಳಾಗಿದ್ದು, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ ಹಾಗೂ ಮಾರ್ಕೊ ಯಾನ್ಸೆನ್ ತಂಡಕ್ಕೆ ವಾಪಸ್ಸಾಗಿದ್ದು, ಭಾರತ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.
ಭಾರತದ ಆಡುವ ಬಳಗ: ಅಭಿಷೇಕ್ ಶರ್ಮಾ, ಈಶಾನ್ ಕಿಶನ್(ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ನಾಯಕ), ಹಾರ್ದಿಕ್ ಪಾಂಡ್ಯ, ಶಿವಮ್ ದುಬೆ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅರ್ಶದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ
ದಕ್ಷಿಣ ಆಫ್ರಿಕಾ ಆಡುವ ಬಳಗ: ಐಡನ್ ಮಾರ್ಕ್ರಾಮ್(ನಾಯಕ), ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ರಯಾನ್ ರಿಕೆಲ್ಟನ್, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಟ್ರಿಸ್ಟನ್ ಸ್ಟಬ್ಸ್, ಮಾರ್ಕೋ ಜೇನ್ಸನ್, ಕಾರ್ಬಿನ್ ಬೋಶ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಲುಂಗಿ ಎನ್ಗಿಡಿ

