HomeKarnatakaBIG NEWS: ಜೂನ್ ಒಳಗೆ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ

BIG NEWS: ಜೂನ್ ಒಳಗೆ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ

ಕಾರವಾರ: ಜೂನ್ ಒಳಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅಂಕೋಲಾ ತಾಲೂಕಿನ ಮಂಜುಗಣಿಯಲ್ಲಿ ಭಾನುವಾರ ಗಂಗಾವಳಿ -ಮಂಜುಗಣಿ ಸೇತುವೆ ಉದ್ಘಾಟಿಸಿ ಅವರು ಮಾತನಾಡಿದರು.

ಗೋಕರ್ಣ ಪಟ್ಟಣ ಪಂಚಾಯಿತಿ ಮೇಲ್ದರ್ಜೆಗೇರಿಸುವಂತೆ ಬೇಡಿಕೆ ಇದೆ. ಆದರೆ, ಚುನಾವಣೆ ಸಮೀಪಿಸಿದ್ದು, ಜನಗಣತಿ ಕೂಡ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಹೊಸದಾಗಿ ಪಟ್ಟಣ ಪಂಚಾಯಿತಿ ರಚನೆ ಸಾಧ್ಯವಿಲ್ಲ. ಚುನಾವಣೆ ಮುಗಿದ ನಂತರ ಗೋಕರ್ಣ ಪಟ್ಟಣ ಪಂಚಾಯಿತಿ ರಚನೆ ಮಾಡುವುದಾಗಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ನೀತಿ ರೂಪಿಸಲಾಗುತ್ತಿದ್ದು, ಕರ್ನಾಟಕದತ್ತ ಪ್ರವಾಸಿಗರನ್ನು ಸೆಳೆಯುವ ಯೋಜನೆ ಕಾರ್ಯಗತಗೊಳಿಸಲಾಗುವುದು ಎಂದು ಹೇಳಿದ್ದಾರೆ.

 ಸಚಿವ ಮಂಕಾಳ ವೈದ್ಯ, ಶಾಸಕರಾದ ಆರ್.ವಿ. ದೇಶಪಾಂಡೆ, ಸತೀಶ್ ಸೈಲ್, ದಿನಕರ ಶೆಟ್ಟಿ, ಭೀಮಣ್ಣ ನಾಯ್ಕ ಮತ್ತಿತರರು ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular