HomeLatest NewsT20 World Cup 2026 | ಮಿಲ್ಲರ್, ಬ್ರೆವಿಸ್, ಸ್ಟಬ್ಸ್ ಅಬ್ಬರ: ಸಂಕಷ್ಟಕ್ಕೆ ಸಿಲುಕಿ ಸಿಡಿದೆದ್ದ...

T20 World Cup 2026 | ಮಿಲ್ಲರ್, ಬ್ರೆವಿಸ್, ಸ್ಟಬ್ಸ್ ಅಬ್ಬರ: ಸಂಕಷ್ಟಕ್ಕೆ ಸಿಲುಕಿ ಸಿಡಿದೆದ್ದ ಆಫ್ರಿಕಾ; ಭಾರತಕ್ಕೆ ಸವಾಲಿನ ಗುರಿ

ಐಸಿಸಿ ಪುರುಷರ ಟಿ ಟ್ವೆಂಟಿ ವಿಶ್ವಕಪ್ 2026ರ ಸೂಪರ್ 8 ಸುತ್ತಿನ ಮೂರನೇ ಪಂದ್ಯ ಇಂದು ( ಫೆಬ್ರವರಿ 22 ) ನಡೆಯುತ್ತಿದ್ದು, ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆರಿಸಿಕೊಂಡು 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 187 ರನ್ ಕಲೆಹಾಕಿ ದಕ್ಷಿಣ ಆಫ್ರಿಕಾಗೆ 188 ರನ್‌ಗಳ ಸವಾಲಿನ ಗುರಿಯನ್ನು ನೀಡಿದೆ.

ದಕ್ಷಿಣ ಆಫ್ರಿಕಾ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟನ್ ಡಿ ಕಾಕ್ 6 ರನ್ ಕಲೆಹಾಕಿದರೆ, ಏಡನ್ ಮಾರ್ಕ್ರಮ್ 4 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಬೆನ್ನಲ್ಲೇ ರಯಾನ್ ರಿಕಲ್ಟನ್ 7 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಈ ಮೂಲಕ ದಕ್ಷಿಣ ಆಫ್ರಿಕಾ ಕೇವಲ 20 ರನ್‌ಗೆ ತನ್ನ ಮೂರು ವಿಕೆಟ್ ಕಳೆದುಕೊಂಡು ಕೆಟ್ಟ ಆರಂಭ ಪಡೆದುಕೊಂಡಿತು. ಹೀಗೆ ಹೀನಾಯ ಆರಂಭ ಪಡೆದುಕೊಂಡ ದಕ್ಷಿಣ ಆಫ್ರಿಕಾಗೆ ನಾಲ್ಕನೇ ವಿಕೆಟ್‌ಗೆ ಜತೆಯಾದ ಡಿವಾಲ್ಡ್ ಬ್ರೆವಿಸ್ ಹಾಗೂ ಡೇವಿಡ್ ಮಿಲ್ಲರ್ 50 ಎಸೆತಗಳಲ್ಲಿ 97 ರನ್‌ಗಳ ಜತೆಯಾಟವನ್ನಾಡಿ ತಂಡಕ್ಕೆ ದೊಡ್ಡ ಸುಧಾರಣೆ ನೀಡಿದರು. ಬ್ರೆವಿಸ್ 29 ಎಸೆತಗಳಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 45 ರನ್ ಬಾರಿಸಿದರೆ, ಡೇವಿಡ್ ಮಿಲ್ಲರ್ 35 ಎಸೆತಗಳಲ್ಲಿ 7 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 63 ರನ್ ಚಚ್ಚಿದರು. ಇನ್ನುಳಿದಂತೆ ಅಂತಿಮ ಹಂತದವರೆಗೂ ನಿಂತು ಕೊನೆಯಲ್ಲಿ ಅಬ್ಬರಿಸಿದ ಟ್ರಿಸ್ಟನ್ ಸ್ಟಬ್ಸ್ 24 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 44 ರನ್ ಬಾರಿಸಿದರೆ, ಮಾರ್ಕೊ ಯಾನ್ಸೆನ್ 2, ಕಾರ್ಬಿನ್ ಬಾಷ್ 5 ರನ್ ಹಾಗೂ ಯಾವುದೇ ರನ್ ಗಳಿಸದ ಕಗಿಸೊ ರಬಾಡಾ ಅಜೇಯರಾಗಿ ಉಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತದ ಪರ ಜಸ್‌ಪ್ರೀತ್ ಬುಮ್ರಾ ಮೂರು ವಿಕೆಟ್, ಅರ್ಷ್‌ದೀಪ್ ಸಿಂಗ್ ಎರಡು ವಿಕೆಟ್, ವರುಣ್ ಚಕ್ರವರ್ತಿ ಹಾಗೂ ಶಿವಮ್ ದುಬೆ ತಲಾ ಒಂದೊಂದು ವಿಕೆಟ್ ಪಡೆದರು.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular