HomeKarnatakaರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಈ ವರ್ಷ ವಾಡಿಕೆಗಿಂತ ಅಧಿಕ ಬಿಸಿಲು, ಹೆಚ್ಚು ಉಷ್ಣಾಂಶ

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಈ ವರ್ಷ ವಾಡಿಕೆಗಿಂತ ಅಧಿಕ ಬಿಸಿಲು, ಹೆಚ್ಚು ಉಷ್ಣಾಂಶ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಅವಧಿಯಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೇಸಿಗೆ ಶುರುವಿನಲ್ಲೇ ಬಿಸಿಲ ತಾಪಕ್ಕೆ ಜನ ಬಳಲುವಂತಾಗಿದೆ. ಅನೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚು ಉಷ್ಣಾಂಶ ದಾಖಲಾಗಿದೆ. ಶಿವಮೊಗ್ಗ, ಬಾಗಲಕೋಟೆ, ಹಾವೇರಿ, ಉತ್ತರ ಕನ್ನಡ ಸೇರಿ ಅನೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ. ಕಲಬುರಗಿಯಲ್ಲಿ 36 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಕೆಲವೆಡೆ ವಾಡಿಕೆಗಿಂತ ಮೂರು ಡಿಗ್ರಿ ಸೆಲ್ಸಿಯಸ್ ವರೆಗೂ ಹೆಚ್ಚು ಉಷ್ಣಾಂಶ ದಾಖಲಾಗಿದೆ.

ಜಾಗತಿಕ ತಾಪಮಾನ ಏರಿಕೆ, ತೇವಾಂಶ ಕೊರತೆ, ಲಾ ನಿನಾ ಸೇರಿ ವಿವಿಧ ಕಾರಣಗಳಿಂದ ಮಾರ್ಚ್ ಮತ್ತು ಏಪ್ರಿಲ್ ನಲ್ಲಿ ಗರಿಷ್ಠ ತಾಪಮಾನ ವಾಡಿಕೆಗಿಂತ 4-5 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಒಳನಾಡಿನ ಯಾದಗಿರಿ, ಕಲಬುರಗಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಬಳ್ಳಾರಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್, ಮೇ ತಿಂಗಳು ಗರಿಷ್ಠ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್ ನಿಂದ 45 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿಯೂ ಉಷ್ಣಾಂಶ ಹೆಚ್ಚಳವಾಗವ ಸಾಧ್ಯತೆಯಿದ್ದು, 39 ಡಿಗ್ರಿ ಸೆಲ್ಸಿಯಸ್ ತಲುಪಬಹುದು ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ ತಿಳಿಸಿದ್ದಾರೆ,

ಅಂತರ್ಜಲ ಬಳಕೆ ಅತಿಯಾಗಿರುವ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ ಮೊದಲಾದ ಜಿಲ್ಲೆಗಳ 43 ತಾಲೂಕುಗಳಲ್ಲಿ ಅಂತರ್ಜಲ ಮಟ್ಟ ಕುಸಿದು ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ತಾಪಮಾನ ಹೆಚ್ಚಳವಾದಾಗ ಮೋಡಗಳ ರಚನೆಯಿಂದ ಗುಡುಗು, ಸಿಡಿಲು ಆರ್ಭಟ ಹೆಚ್ಚಿರುತ್ತದೆ. ಸ್ವಲ್ಪ ಬೇಸಿಗೆ ಮಳೆಯೂ ಬರಲಿದೆ. ಇದರಿಂದ ಧಗೆ ಮತ್ತಷ್ಟು ಹೆಚ್ಚಾಗುತ್ತದೆ.

ಅಲ್ಲದೇ, ಬೇಸಿಗೆ ರೋಗಗಳನ್ನು ಹರಡುವ ಋತುಮಾನ ಆಗಿರುವುದರಿಂದ ಕಾಲರಾ, ಜ್ವರ ಭಾದೆ, ತಲೆನೋವು ಹೆಚ್ಚಾಗುತ್ತದೆ. ಜನ ಎಚ್ಚರಿಕೆ ವಹಿಸಬೇಕು. ಕಲುಷಿತ ನೀರು, ಆಹಾರ ಸೇವನೆಯಿಂದ ದೂರವಿರಬೇಕು. ಬೇಸಿಗೆಯಲ್ಲಿ ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಬಿಸಿಲಿನ ತೀವ್ರತೆ ಹೆಚ್ಚಾಗಿರುವದರಿಂದ ಆಗಾಗ ನೀರು ಕುಡಿಯಬೇಕು. ಸಡಿಲವಾದ ತೆಳ್ಳನೆಯ ಉಡುಪು ಧರಿಸಬೇಕು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular