ಹಾಸನ: ಹಾಸನದಲ್ಲಿ ಚಲಿಸುತ್ತಿದ್ದ ಸ್ಕೂಟರ್ ನಿಂದ ಬಿದ್ದು ಯುವತಿ ಸಾವನ್ನಪ್ಪಿದ್ದಾರೆ. ದಾರಿಯಲ್ಲಿದ್ದ ಹಂಪ್ಸ್ ಕಾಣದೆ ಅಪಘಾತ ಸಂಭವಿಸಿದೆ.
ರಮ್ಯಾ(23) ಮೃತಪಟ್ಟವರು ಎಂದು ಹೇಳಲಾಗಿದೆ. ಸ್ಕೂಟರ್ ನಿಂದ ಬಿದ್ದು ರಮ್ಯಾ ಸ್ಥಳದಲ್ಲೇ ಮೃತಪಟ್ಟಿದ್ದು, ಸ್ವಾತಿ(24) ಸ್ಥಿತಿ ಗಂಭೀರವಾಗಿದೆ. ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಸ್ವಾತಿಯವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರಮ್ಯಾ ಖಾಸಗಿ ಕಾಲೇಜಿನಲ್ಲಿ ಎಂಸಿಎ ವ್ಯಾಸಂಗ ಮಾಡುತ್ತಿದ್ದರು. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

