HomeLive NewsBIG NEWS: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಆತ್ಮಹತ್ಯೆ ತಡೆಗೆ BMRCL ಕ್ರಮ: ಪಿಎಸ್​ಡಿ ಡೋರ್ ಬದಲಿಗೆ...

BIG NEWS: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಆತ್ಮಹತ್ಯೆ ತಡೆಗೆ BMRCL ಕ್ರಮ: ಪಿಎಸ್​ಡಿ ಡೋರ್ ಬದಲಿಗೆ ಸ್ಟೀಲ್ ಬ್ಯಾರಿಕೇಡ್ ಅಳವಡಿಕೆ

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಇತ್ತೀಚೆಗೆ ರೈಲ್ವೆ ಟ್ರ್ಯಾಕ್ ಗೆ ಹಾರಿ ಆತ್ಮಹತ್ಯೆ ಯತ್ನ, ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ಎರಡು ವರ್ಷಗಳಲ್ಲಿ 10 ಕ್ಕೂ ಹೆಚ್ಚು ಪ್ರಕರಣಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಮೆಟ್ರೋ ನಿಲ್ದಾಣಗಳ್ಲಲಿ ಆತ್ಮಹತ್ಯೆ ಪ್ರಕರಣ ತಡೆಯಲು ಬಿಎಂಆರ್ ಸಿ ಎಲ್ ಮುಂದಾಗಿದೆ.

ಈ ನಿಟ್ಟಿನಲ್ಲಿ ಮೆಟ್ರೋ ಸ್ಟೇಷನ್​ಗಳಿಗೆ ಪಿಎಸ್​ಡಿ ಅಳವಡಿಸುವಂತೆ ಪ್ರಯಾಣಿಕರಿಂದಲೂ ಒತ್ತಾಯ ಕೇಳಿಬಂದಿತ್ತು. ಇದೀಗ ಬಿಎಂಆರ್​​ಸಿಎಲ್ ಸ್ಟೀಲ್ ಬ್ಯಾರಿಕೇಡ್ ಗಳನ್ನು ಅಳವಡಿಸಲು ನಿರ್ಧರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆಜಸ್ಟಿಕ್ ಮೆಟ್ರೋ ಸ್ಟೇಷನ್, ಆರ್.ವಿ ರೋಡ್, ಕೆ.ಆರ್.ಪುರ, ಇಂದಿರಾ ನಗರ, ಬೆನ್ನಿಗಾನಹಳ್ಳಿ ಮೆಟ್ರೋ ನಿಲ್ದಾಣಗಳಲ್ಲಿ ಸ್ಟೀಲ್ ಬ್ಯಾರಿಕೇಡ್​ಗಳನ್ನು ಅಳವಡಿಸಲಾಗುತ್ತಿದೆ.

ಸ್ಟೀಲ್ ಬ್ಯಾರಿಕೇಡ್ ಗಳು ಉಪಯುಕ್ತವಾಗಲಾರದು, ಪಿಎಸ್ ಡಿ ಡೋರ್​ಗಳನ್ನು ಅಳವಡಿಸಿದರೆ ಮಾತ್ರ, ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುವವರನ್ನು ತಡೆಗಟ್ಟಬಹುದು ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ.

ಒಟ್ಟು 83 ಮೆಟ್ರೋ ನಿಲ್ದಾಣಗಳ ಪೈಕಿ ಸದ್ಯ ನಾಲ್ಕು ನಿಲ್ದಾಣಗಳಲ್ಲಿ ಸ್ಟೀಲ್ ಬ್ಯಾರಿಕೇಡ್ ​​ಗಳನ್ನು ಅಳವಡಿಸಲಾಗಿದೆ. ಉಳಿದ ಮೆಟ್ರೋ ಸ್ಟೇಷನ್​ಗಳಲ್ಲಾದರೂ ಪಿಎಸ್ ಡಿ ಡೋರ್ ಅಥವಾ ಸ್ಟೀಲ್ ಗೇಟ್​ಗಳನ್ನು ಅಳವಡಿಸಿ ಎಂಬುದು ಪ್ರಯಾಣಿಕರ ಮನವಿ.

ಈ ನಡುವೆ ಬಿಎಂ ಆರ್ ಸಿ ಎಲ್ ಮಾತ್ರ ಪಿಂಕ್ ಲೈನ್ ಕಾಳೇನ ಅಗ್ರಹಾರ – ನಾಗವಾರ ಮೆಟ್ರೋ ಮಾರ್ಗದ ಅಂಡರ್ ಗ್ರೌಂಡ್ ಮೆಟ್ರೋ ಮಾರ್ಗದಲ್ಲಿ ಪಿಎಸ್ ಡಿ ಡೋರ್ ಅಳವಡಿಸಲು ಸಿದ್ದತೆ ಮಾಡಿಕೊಂಡಿದ್ದು, ಈಗಾಗಲೇ ಟೆಂಡರ್ ಕೂಡ ನೀಡಿದೆ ಎಂಬುದು ವಿಶೇಷ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular