ಉಡುಪಿ : ಉಡುಪಿ ನಗರದ ಅತ್ಯಂತ ಜನನಿಬಿಡ ಪ್ರದೇಶವಾದ ಕಲ್ಸಂಕ ಜಂಕ್ಷನ್ನಲ್ಲಿ ಗದಗ ಮೂಲದ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಕಲ್ಸಂಕ ಜಂಕ್ಷನ್ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಅದೃಷ್ಟವಶಾತ್ ದುರಂತವೊಂದು ತಪ್ಪಿದೆ. ಗದಗ ಮೂಲದ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭೀತಿ ಹುಟ್ಟಿಸಿದೆ.
ಕೌಟುಂಬಿಕ ಕಲಹದಿಂದ ಬೇಸತ್ತು ಈ ನಿರ್ಧಾರಕ್ಕೆ ಬಂದಿದ್ದ ಯುವಕನ ಹುಚ್ಚಾಟದಿಂದ ಸಂಚಾರ ದಟ್ಟಣೆಯ ನಡುವೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆಯಿತ್ತು. ಆದರೆ, ಸ್ಥಳದಲ್ಲಿದ್ದ ಪೊಲೀಸರು ಸಮಯಪ್ರಜ್ಞೆ ಮೆರೆದು ಕ್ಷಣಾರ್ಧದಲ್ಲಿ ಆತನನ್ನು ತಡೆಯುವ ಮೂಲಕ ಭಾರಿ ದುರಂತವನ್ನು ತಪ್ಪಿಸಿದ್ದಾರೆ.

