HomeKarnatakaBREAKING: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಿಕ್ಲು ಶಿವ ಕೊಲೆ ಕೇಸ್ ಆರೋಪಿಯ ಅಟ್ಟಹಾಸ: ಸಹ ಕೈದಿಗಳ...

BREAKING: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಿಕ್ಲು ಶಿವ ಕೊಲೆ ಕೇಸ್ ಆರೋಪಿಯ ಅಟ್ಟಹಾಸ: ಸಹ ಕೈದಿಗಳ ಮೇಲೆ ಹಲ್ಲೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯೊಬ್ಬ ಸಹ ಕೈದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ ಪ್ರದೀಪ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಹ ಕೈದಿಗಳ ಮೇಲೆ ಹಲ್ಲೆ ನಡೆಸಿದ್ದಾನೆ. ಕೊಲೆ ಪ್ರಕರಣದಲ್ಲಿ ಬಂಧನಕ್ಕೀಡಾಗಿ ಜೈಲು ಸೇರಿದ್ದರೂ ಬುದ್ಧಿ ಕಲಿಯದ ಆರೋಪಿ, ಮತ್ತೆ ತನ್ನ ರೌಡಿಸಂ ಪ್ರದರ್ಶಿಸಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆಬ್ರವರಿ 18ರಂದು ಸುರೇಶ್ ಹಾಗೂ ಆದಿತ್ ಮಧುಕಿರಣ್ ಎಂಬುವವರ ಮೇಲೆ ಪ್ರದೀಪ್ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಸುರೇಶ್ ಮತ್ತು ಆದಿತ್ ಮಧುಕಿರಣ್ ಅವರ ಮೂಗು ಮತ್ತು ಕಪಾಳಕ್ಕೆ ಪ್ರದೀಪ್​​ ಹೊಡೆದಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನ ಸಿಬ್ಬಂದಿ ನಾನ್-ಕಾಗ್ನಿಜೆಬಲ್ ರಿಪೋರ್ಟ್ (ಎನ್‌ಸಿಆರ್) ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular