HomeKarnatakaBREAKING : CM ಸಿದ್ದರಾಮಯ್ಯ ಸಂಪುಟಕ್ಕೆ 31 ಶಾಸಕರ ‘ಗೂಗ್ಲಿ’ : ಸಚಿವ ಸ್ಥಾನ ಕೋರಿ...

BREAKING : CM ಸಿದ್ದರಾಮಯ್ಯ ಸಂಪುಟಕ್ಕೆ 31 ಶಾಸಕರ ‘ಗೂಗ್ಲಿ’ : ಸಚಿವ ಸ್ಥಾನ ಕೋರಿ ನೇರವಾಗಿ ರಾಹುಲ್ ಗಾಂಧಿಗೆ ಪತ್ರ.!

ಬೆಂಗಳೂರು :   ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಪುನಾರಚನೆಯ ಸದ್ದು ಜೋರಾಗಿ ಕೇಳಿಬರುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷಗಳ ಮೈಲಿಗಲ್ಲು ಸಮೀಪಿಸುತ್ತಿದ್ದಂತೆಯೇ, ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಸುಮಾರು 31 ಕಾಂಗ್ರೆಸ್ ಶಾಸಕರು ಒಗ್ಗಟ್ಟಾಗಿ ಹೈಕಮಾಂಡ್’ಗೆ ಪತ್ರ ಬರೆದಿದ್ದಾರೆ.

ಪ್ರಸಕ್ತ ಸಚಿವ ಸಂಪುಟದಲ್ಲಿ ಬದಲಾವಣೆ ತರಬೇಕು, ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯವೈಖರಿ ಸರಿ ಇಲ್ಲ ಮತ್ತು ಹೊಸಬರಿಗೆ ಮಂತ್ರಿಮಂಡಲದಲ್ಲಿ ಅವಕಾಶ ನೀಡಬೇಕು ಎಂಬುದು ಈ ಶಾಸಕರ ಪ್ರಮುಖ ಬೇಡಿಕೆಯಾಗಿದೆ. ಈ ಪತ್ರವು ಕೈ ಪಾಳಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ನಾಂದಿ ಹಾಡಿದ್ದು, ‘ ಹಿರಿಯರನ್ನು ಕೈಬಿಟ್ಟು ಯುವ ಮುಖಗಳಿಗೆ ಆದ್ಯತೆ ನೀಡಬೇಕೆಂಬ ಒತ್ತಡ ಹೈಕಮಾಂಡ್ ಮೇಲೆ ಹೆಚ್ಚಾಗಿದೆ.

ಹೌದು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಸಂಪುಟದಲ್ಲಿ ಬದಲಾವಣೆ ಮಾಡಬೇಕು ಮತ್ತು ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್‌ನ ಒಂದು ಗುಂಪಿನ ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.ಸಚಿವ ಸಂಪುಟದಲ್ಲಿ ಕೆಲವು ಸಚಿವರ ಕಾರ್ಯವೈಖರಿ ತೃಪ್ತಿಕರವಾಗಿಲ್ಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಪತ್ರದಲ್ಲಿ ದೂರಲಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಳೆಯ ಮತ್ತು ಹಿರಿಯ ಸಚಿವರನ್ನು ಕೈಬಿಟ್ಟು, ಪಕ್ಷದ ಸಂಘಟನೆಗೆ ಬಳಸಿಕೊಳ್ಳಬೇಕು ಮತ್ತು ಉದಯೋನ್ಮುಖ ನಾಯಕರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಜಾರಿಗೆ ತರುವಂತೆ ಶಾಸಕರು ಒತ್ತಾಯಿಸಿದ್ದಾರೆ.ವರದಿಗಳ ಪ್ರಕಾರ, ಸುಮಾರು 31  ಕ್ಕೂ ಹೆಚ್ಚು ಶಾಸಕರು ಈ ಅಭಿಯಾನದಲ್ಲಿ ಗುರುತಿಸಿಕೊಂಡಿದ್ದಾರೆ. 31 ಜನರ ಪೈಕಿ ಐವರು ಶಾಸಕರಿಗೆ ಸಚಿವ ಸ್ಥಾನ ಕೊಡಿ ಎಂದು ಮನವಿ ಸಲ್ಲಿಸಲಾಗಿದೆ.

ಶಾಸಕರಾದ ಇಕ್ಬಾಲ್ ಹುಸೇನ್, ಎನ್ ಟಿ  ಶ್ರೀನಿವಾಸ್, ದರ್ಶನ್ ಧ್ರುವ ನಾರಾಯಣ್ , ಶಿವಗಂಗಾ ಬಸವರಾಜು, ಪೊನ್ನಣ್ಣ, ಪ್ರಕಾಶ್ ಕೋಳಿವಾಡ, ಕೆಎಸ್ ಆನಂದ, ಮಂಥರ್ ಗೌಡ, ಡಿ ರವಿಶಂಕರ್, ನಯನಾ ಮೋಟಮ್ಮ, ಮಹೇಂದ್ರ ತಮ್ಮಣ್ಣನವರ್, ಅಶೋಕ್ ಮನಗೂಳಿ, ಪಿ ರವಿ ಕುಮಾರ್ ಸೇರಿ 31 ಶಾಸಕರು ಪತ್ರ ಬರೆದಿದ್ದಾರೆ. ನಾವು ಎಲ್ಲರಿಗೂ ಸಚಿವ ಸ್ಥಾನ ಕೊಡಿ ಎಂದು ಕೇಳುತ್ತಿಲ್ಲ. ನಮ್ಮಲ್ಲಿ ಐದು ಜನರಿಗೆ ಅವಕಾಶ ಕೊಡಿ ಎಂದು ಶಾಸಕರುಗಳು ಮನವಿ ಮಾಡಿದ್ದಾರೆ.

ಪತ್ರದ ಪ್ರಮುಖ ಹೈಲೆಟ್ಸ್

·  ಶಾಸಕರ ಸಂಖ್ಯೆ: 31 ಶಾಸಕರು ಈ ಅಭಿಯಾನದಲ್ಲಿ ಗುರುತಿಸಿಕೊಂಡಿದ್ದಾರೆ.

·  ಪ್ರಮುಖ ದೂರು: ಸಚಿವರು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬ ಅಸಮಾಧಾನ.

·  ಬೇಡಿಕೆ: ಸಂಪುಟ ಪುನಾರಚನೆ ಮಾಡಿ ಹೊಸಬರಿಗೆ ಅವಕಾಶ ನೀಡಬೇಕು.

·  ಕಾನೂನು ಚೌಕಟ್ಟು: ಹೈಕಮಾಂಡ್ ಈ ಬಗ್ಗೆ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular