ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆಯು 2025-26ನೇ ಸಾಲಿನ ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ಖರೀದಿಸಲು 5 ಲಕ್ಷ ರೂಪಾಯಿಗಳ ಸಹಾಯಧನ ನೀಡಲಾಗುವುದು.
ಅರ್ಹತೆಗಳೇನು?
- ವಿದ್ಯಾರ್ಹತೆ: ಕಡ್ಡಾಯವಾಗಿ ಎಸ್ಎಸ್ಎಲ್ಸಿ (SSLC) ಉತ್ತೀರ್ಣರಾಗಿರಬೇಕು.
- ವಯೋಮಿತಿ: 20 ರಿಂದ 55 ವರ್ಷದೊಳಗಿರಬೇಕು.
- ಇತರೆ: ಅರ್ಜಿದಾರರು ಚಾಲ್ತಿಯಲ್ಲಿರುವ ವಾಹನ ಚಾಲನಾ ಪರವಾನಗಿ (Driving License) ಹೊಂದಿರಬೇಕು.
ತರಬೇತಿ ಮತ್ತು ಗುರಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕಾಲ ಉದ್ಯಮಶೀಲತೆ ವಿಷಯದ ಬಗ್ಗೆ ವಿಶೇಷ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಚಿತ್ರದುರ್ಗ ಜಿಲ್ಲೆಗೆ ಒಟ್ಟು 10 ಅಭ್ಯರ್ಥಿಗಳ ಗುರಿ ನಿಗದಿಪಡಿಸಲಾಗಿದ್ದು, ಇದರಲ್ಲಿ ಪರಿಶಿಷ್ಟ ಜಾತಿಯ 6 ಹಾಗೂ ಪರಿಶಿಷ್ಟ ಪಂಗಡದ 4 ಅಭ್ಯರ್ಥಿಗಳಿಗೆ ಅವಕಾಶವಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತರು ಫೆಬ್ರವರಿ 23 ರಿಂದ ಅರ್ಜಿಗಳನ್ನು ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 13ರ ಸಂಜೆ 4.30ರ ಒಳಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಕಾಮನಭಾವಿ ಬಡಾವಣೆ, ಚಿತ್ರದುರ್ಗ. ಇವರ ಕಚೇರಿಗೆ ದ್ವಿ-ಪ್ರತಿಯಲ್ಲಿ (Two Copies) ಅರ್ಜಿಗಳನ್ನು ಸಲ್ಲಿಸತಕ್ಕದ್ದು. ನಿಗದಿತ ಸಮಯದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

