HomeKarnatakaಎಂ. ಫಾರ್ಮಾ ಅಂತಿಮ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ: ಆಯ್ಕೆ ದಾಖಲಿಸಲು ಫೆ. 25...

ಎಂ. ಫಾರ್ಮಾ ಅಂತಿಮ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ: ಆಯ್ಕೆ ದಾಖಲಿಸಲು ಫೆ. 25 ಕೊನೆ ದಿನ

ಎಂ. ಫಾರ್ಮಾ ಎರಡನೇ ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿ ಪ್ರಕಟಿಸಿದ್ದು, ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಫೆ.25ರಂದು ಮಧ್ಯಾಹ್ನ 2 ಗಂಟೆವರೆಗೆ ಅವಕಾಶ ನೀಡಲಾಗಿದೆ.

ಫೆ.25ರಂದು ಸಂಜೆ 8 ಗಂಟೆ ನಂತರ ತಾತ್ಕಾಲಿಕ ಹಾಗೂ ಫೆ.26ರಂದು ಮಧ್ಯಾಹ್ನ 2 ಗಂಟೆ ನಂತರ ಅಂತಿಮ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ.

ಸೀಟು ಹಂಚಿಕೆಯಾದವರು ಫೆ.27ರಿಂದ ಮಾರ್ಚ್ 4ರವರೆಗೆ ಶುಲ್ಕ ಪಾವತಿಸಿ, ಪ್ರವೇಶ ಪತ್ರಗಳನ್ನು ಪಡೆಯುವುದು. ಮಾರ್ಚ್ 5ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಶುಲ್ಕ ಪಾವತಿಸದೇ ಇರುವ ಅಭ್ಯರ್ಥಿಗಳಿಗೆ ಈ ಸುತ್ತಿನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ಇದುವರೆಗೂ ಯಾವುದೇ ಸೀಟು ಹಂಚಿಕೆಯಾಗದಿರುವ ಹಾಗೂ ಕಾಲೇಜಿನಲ್ಲಿ ಪ್ರವೇಶ ಪಡೆದಿರುವ ಅಭ್ಯರ್ಥಿಗಳು (upgradation) ಎರಡನೇ ಸುತ್ತಿನಲ್ಲಿ ಲಭ್ಯವಾಗುವ ಸೀಟುಗಳಿಗೆ ಆಪ್ಷನ್ಸ್ ದಾಖಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular