HomeLatest News2.5 ಲಕ್ಷ ಮೃತ ಮಹಿಳೆಯರ ಖಾತೆಗೂ ಗೃಹಲಕ್ಷ್ಮಿ ಹಣ ಜಮಾ: ಹಿಂಪಡೆಯಲು ಸರ್ಕಾರ ಕ್ರಮ

2.5 ಲಕ್ಷ ಮೃತ ಮಹಿಳೆಯರ ಖಾತೆಗೂ ಗೃಹಲಕ್ಷ್ಮಿ ಹಣ ಜಮಾ: ಹಿಂಪಡೆಯಲು ಸರ್ಕಾರ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಮೃತಪಟ್ಟ 2.5 ಲಕ್ಷ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಜಮಾ ಆಗುತ್ತಿದೆ. ಸುಮಾರು 70 ಸಾವಿರ ಕೋಟಿ ರೂಪಾಯಿ ಸರ್ಕಾರದ ಹಣ ದುರುಪಯೋಗವಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಹಣ ಹಿಂಪಡೆಯಲು ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

ರಾಜ್ಯದಲ್ಲಿ ಸದ್ಯ 1.24 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಪ್ರತಿ ತಿಂಗಳು 15 ಸಾವಿರದಷ್ಟು ಗೃಹಲಕ್ಷ್ಮಿ ಫಲಾನುಭವಿಗಳು ಸೇರ್ಪಡೆಯಾಗುತ್ತಿದ್ದಾರೆ. ವಾರ್ಷಿಕ 2,500 ಕೋಟಿ ರೂಪಾಯಿ ಯೋಜನೆಗೆ ಬಳಕೆ ಮಾಡಲಾಗುತ್ತಿದೆ. ಈ ಹಿಂದೆ ಎರಡು ವರ್ಷಕ್ಕೊಮ್ಮೆ ಜೀವಿತ ಪ್ರಮಾಣ ಪತ್ರ ಪಡೆಯಲು ತಿಳಿಸಲಾಗಿದೆ. ಆದರೆ ಅಷ್ಟು ದೀರ್ಘಾವಧಿಯಲ್ಲಿ ಅನೇಕರು ಮೃತಪಟ್ಟಿದ್ದಾರೆ.

ಸುಮಾರು 2.50 ಲಕ್ಷ ಮಂದಿಯ ಗೃಹಲಕ್ಷ್ಮಿ ಹಣ ದುರುಪಯೋಗವಾಗಿದೆ. ನಿಧನರಾದ ಕೂಡಲೇ ಮಾಹಿತಿ ನೀಡದ ಪರಿಣಾಮ ಅಂತಹವರ ಖಾತೆಗೆ 70 ಕೋಟಿ ರೂಪಾಯಿ ಜಮಾ ಆಗಿದೆ. ಅವರ ಹೆಸರಲ್ಲಿ ಪಡಿತರ ಕೂಡ ಪಡೆದಿರುವ ಸಾಧ್ಯತೆಯಿದ್ದು ಕುಟುಂಬ ತಂತ್ರಾಂಶದ ಮೂಲಕ ಈ ದುರುಪಯೋಗ ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಜೀವಿತ ಪ್ರಮಾಣ ಪತ್ರ ಸಲ್ಲಿಸಬೇಕು. ಇಲ್ಲದಿದ್ದರೆ ಅವರನ್ನು ಯೋಜನೆಯಿಂದ ಕೈ ಬಿಡಲಾಗುವುದು. ಅಲ್ಲದೆ ಇದಕ್ಕಾಗಿ ಇ-ಕೆವೈಸಿ ತಂತ್ರಜ್ಞಾನ ಆಧಾರಿತ ಆಪ್ ಅಭಿವೃದ್ಧಿಪಡಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸರ್ಕಾರಕ್ಕೆ ಸಲಹೆ ನೀಡಿದೆ. ಅಂಗನವಾಡಿ ಕಾರ್ಯಕರ್ತೆಯರ ಮೂಲಕ ನಿಧನರಾದ ಫಲಾನುಭವಿಗಳ ಮಾಹಿತಿ ಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular