ಶಿವಮೊಗ್ಗದ ಸೂಳೆಬೈಲಿನಲ್ಲಿ ನಡೆದ SSLC ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ ಒಟ್ಟು 15 ಲಕ್ಷ ರೂ. ಪರಿಹಾರ ಘೋಷಿಸಿವೆ.
ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ಹಾಗೂ ಶಿಕ್ಷಣ ಇಲಾಖೆಯಿಂದ 5 ಲಕ್ಷ ಪರಿಹಾರ ನೀಡಲಾಗುತ್ತಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಈ ಕುರಿತು ಘೋಷಣೆ ಮಾಡಿದ್ದಾರೆ.
ಶಿವಮೊಗ್ಗದ ಕೋಟೆ ಮಾರಿಕಾಂಬಾ ಜಾತ್ರೆಯ ಸಂಭ್ರಮದ ನಡುವೆಯೇ ನಡೆದ ಈ ಭೀಕರ ಘಟನೆಯು ಇಡೀ ನಗರವನ್ನು ಬೆಚ್ಚಿಬೀಳಿಸಿದೆ. ಮೃತ ವಿದ್ಯಾರ್ಥಿಯ ಕುಟುಂಬದ ಆರ್ಥಿಕ ಪರಿಸ್ಥಿತಿ ಹಾಗೂ ಘಟನೆಯ ಗಂಭೀರತೆಯನ್ನು ಪರಿಗಣಿಸಿ ಈ ಕೆಳಗಿನಂತೆ ಪರಿಹಾರ ಘೋಷಿಸಲಾಗಿದೆ:
ಘಟನೆಯ ಹಿನ್ನೆಲೆ
ಸಂಕೇತ್ (15) ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದನು. ಸೋಮವಾರ ಸಂಜೆ ಶಾಲೆಯಲ್ಲಿ ವಿಶೇಷ ತರಗತಿ (Special Class) ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ.ಸಂಕೇತ್ನ ಸ್ನೇಹಿತ ಗಿರೀಶ್ ಎಂಬುವವರ ಮೇಲೆ ಕೆಲವು ವಿದ್ಯಾರ್ಥಿಗಳು ಜಗಳ ತೆಗೆದು ಹಲ್ಲೆ ಮಾಡುತ್ತಿದ್ದರು.ಸ್ನೇಹಿತನನ್ನು ಉಳಿಸಲು ಹೋದ ಸಂಕೇತ್ ಮೇಲೆ ದುಷ್ಕರ್ಮಿಗಳು ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಎದೆ ಮತ್ತು ಮುಖದ ಭಾಗಕ್ಕೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಸಂಕೇತ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.
ಅಪ್ರಾಪ್ತರ ಬಂಧನ: ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಐವರು ಅಪ್ರಾಪ್ತ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಶಿವಮೊಗ್ಗ ಎಸ್ಪಿ ನಿಖಿಲ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೊಲೆಯ ಹಿಂದೆ ಯಾವುದಾದರೂ ಪ್ರಚೋದನೆ ಅಥವಾ ಗಾಂಜಾ ಮಾಫಿಯಾದ ಕೈವಾಡವಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

