HomeLatest NewsSHOCKING: ಮೆಟ್ರೋ ಹಳಿಗೆ ಹಾರಿ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ

SHOCKING: ಮೆಟ್ರೋ ಹಳಿಗೆ ಹಾರಿ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ

ನವದೆಹಲಿ: 45 ವರ್ಷದ ವ್ಯಕ್ತಿಯೊಬ್ಬರು ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೆಹಲಿಯ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

ಕಳೆದ ಐದು ದಿನಗಳಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ಮೃತನನ್ನು ರಾಜಸ್ಥಾನದ ಕರೋಲಿ ಜಿಲ್ಲೆಯ ಮಹಾರಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಹಳಿಯಿಂದ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಡಿಡಿಯು ಆಸ್ಪತ್ರೆಗೆ ರವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಾರಾಜ್ ಸಿಂಗ್ ಹಲವು ವರ್ಷಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಆರ್.ಎಂ.ಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಣ್ಣನ ಮಗಳ ಮದುವೆಗೆಂದು ದೆಹಲಿಗೆ ಬಂದಿದ್ದರು. ಹೀಗೆ ಬಂದವರೆ ಮೆಟ್ರೋ ನಿಲ್ದಾಅಣಕ್ಕೆ ತೆರಳಿ ಏಕಾಏಕಿ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಕಳೆದ ಐದು ದಿನಗಳ ಹಿಂದಷ್ಟೇ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ನಡೆದಿತ್ತು.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular