HomeKarnatakaBIG NEWS: ಗರ್ಭಿಣಿ ಪತ್ನಿಗೆ ಚಾಕು ಇರಿದು ಆತ್ಮಹತ್ಯೆಗೆ ಶರಣಾದ ಪತಿ

BIG NEWS: ಗರ್ಭಿಣಿ ಪತ್ನಿಗೆ ಚಾಕು ಇರಿದು ಆತ್ಮಹತ್ಯೆಗೆ ಶರಣಾದ ಪತಿ

ಬೆಳಗಾವಿ: ಗರ್ಭಿಣಿ ಪತ್ನಿಗೆ ಚಾಕು ಇರಿದ ಪತಿ ಮಹಾಶಯ ಬಳಿಕ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದಿದೆ.

ರಾಮದುರ್ಗ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದಾಗಿ ಪತ್ನಿಯ ಜೊತೆ ಜಗಳವಾಡಿ, ಆಕೆಗೆ ಚಾಕುವಿನಿಂದ ಇರಿದಿದ್ದು, ಬಳಿಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಮೇಶ ಬಡಿಗೇರ (34) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಕು ಇರಿತದಿಂದಿದ್ದಾಗಿ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪತಿ ಉಮೇಶ್ ಕುಡಿದು ಬಂದು ಪತ್ನಿಯೊಂದಿಗೆ ಗಲಾಟೆ ಮಾಡಿದ್ದ. ಇಬ್ಬರ ನಡುವೆ ಮಾತಿಗೆ ಮಾತು ಬೆಳಿದಿದ್ದು, ಕೋಪದ ಬರದಲ್ಲಿ ಕೈಗೆ ಸಿಕ್ಕ ಚಾಕುವಿನಿಂದ ಪತ್ನಿ ಗರ್ಭಿಣಿ ಎಂಬುದನ್ನೂ ನೋಡದೇ ಇರಿದಿದ್ದಾನೆ.

ಗಂಭೀರವಾಗಿ ಹಲ್ಲೆಗೊಳಗಾದ ಪತ್ನಿ ಸ್ಥಳದಲ್ಲೇ ಕುಸಿದು ಬೀಳುತ್ತಿದ್ದಂತೆ ಆತಂಕಗೊಂಡ ಉಮೇಶ್, ತಾನು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಸದ್ಯ ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular