HomeKarnatakaಭವಿಷ್ಯದಲ್ಲಿ ಇಂತಹ ಕೃತ್ಯ ಎಸಗುವ ಮುನ್ನ ನೂರು ಬಾರಿ ಯೋಚಿಸಬೇಕಾದ ಸ್ಥಿತಿ ನಿರ್ಮಾಣ: ಶಿವಮೊಗ್ಗ ವಿದ್ಯಾರ್ಥಿ...

ಭವಿಷ್ಯದಲ್ಲಿ ಇಂತಹ ಕೃತ್ಯ ಎಸಗುವ ಮುನ್ನ ನೂರು ಬಾರಿ ಯೋಚಿಸಬೇಕಾದ ಸ್ಥಿತಿ ನಿರ್ಮಾಣ: ಶಿವಮೊಗ್ಗ ವಿದ್ಯಾರ್ಥಿ ಸಾವಿಗೆ ನ್ಯಾಯ ಕೊಡಿಸುವುದಾಗಿ ಸಿದ್ಧರಾಮಯ್ಯ ಭರವಸೆ

ಬೆಂಗಳೂರು: ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ, ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ. ಕೊಲೆಯಲ್ಲಿ ಭಾಗಿಯಾದವರು ಇನ್ನೂ ಚಿಕ್ಕಪ್ರಾಯದ ಹುಡುಗರು ಎಂದು ಕೇಳಿ ದಿಗ್ಭ್ರಮೆಯಾಯಿತು. ಚೆನ್ನಾಗಿ ಓದಿ, ಭವಿಷ್ಯ ರೂಪಿಸಿಕೊಂಡು, ಕುಟುಂಬಕ್ಕೆ ಆಸರೆಯಾಗಬೇಕಿದ್ದ ಮಕ್ಕಳು ದುಶ್ಚಟಗಳಿಗೆ ಬಲಿಯಾಗಿ, ಹೀಗೆ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗುವುದು ದುರದೃಷ್ಟಕರ ಎಂದು ತಿಳಿಸಿದ್ದಾರೆ.

ಕೊಲೆಯ ಹಿಂದಿನ ಉದ್ದೇಶವೇನೇ ಇರಲಿ, ಕೊಲೆಗೈದವರು ಯಾರೇ ಆಗಿರಲಿ, ಅವರನ್ನು ಕಾನೂನಿನ ಮೂಲಕ ಹೆಡೆಮುರಿ ಕಟ್ಟಿ, ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ಎಸಗುವ ಮುನ್ನ ನೂರು ಬಾರಿ ಯೋಚಿಸಬೇಕಾದಂತಹ ಸ್ಥಿತಿ ನಿರ್ಮಾಣ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲ್ಯದಲ್ಲೇ ದ್ವೇಷ, ಹಿಂಸೆ, ಅಪರಾಧ ಕೃತ್ಯಗಳ ದುರ್ಬುದ್ದಿ ಬೆಳೆಸಿಕೊಳ್ಳುವುದು ಅತ್ಯಂತ ಅಪಾಯಕಾರಿ. ಇಂತಹ ಮನಸ್ಥಿತಿಯಿರುವವರು ದುಶ್ಚಟಗಳಿಗೆ ದಾಸರಾದರೆ ಪರಿಸ್ಥಿತಿ ಕೈಮೀರಿ ಹೋಗುವುದು ಖಚಿತ. ಪೋಷಕರು ಸಹ ತಮ್ಮ ಮಕ್ಕಳ ಚಲನವಲನಗಳ ಮೇಲೆ ನಿಗಾ ವಹಿಸಬೇಕು, ಮಕ್ಕಳು ಹಾದಿ ತಪ್ಪಿದ್ದರೆ ತಿದ್ದಿ ಬುದ್ದಿ ಹೇಳಬೇಕು. ಶಾಲೆಯ ಸುತ್ತಮುತ್ತ ಕಾನೂನು ಬಾಹಿರ ಕೃತ್ಯಗಳು ನಡೆಯದಂತೆ ಆಡಳಿತ ಮಂಡಳಿ ನಿಗಾ ವಹಿಸಬೇಕು. ಅಗತ್ಯಬಿದ್ದರೆ ಪೊಲೀಸರ ನೆರವನ್ನು ಪಡೆಯಬೇಕು ಎಂದು ಸೂಚಿಸಿದ್ದಾರೆ.

ಮಗನನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಕುಟುಂಬವನ್ನು ಸಂತೈಸುವ ಉದ್ದೇಶದಿಂದ ಮೃತನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ಪರಿಹಾರವನ್ನು ನೀಡಲಾಗುವುದು. ಈ ದುಷ್ಕೃತ್ಯ ಎಸಗಿದ ಎಲ್ಲರನ್ನೂ ಈಗಾಗಲೇ ಬಂಧಿಸಲಾಗಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳುವ ವಾಗ್ದಾನವನ್ನು ಕೂಡ ಆ ನೊಂದ ಕುಟುಂಬಕ್ಕೆ ಈ ವೇಳೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೆ ಕಿವಿಗೊಡದೆ, ಶಾಂತಿ – ಸಂಯಮದಿಂದ ವರ್ತಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ. ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುವ ಕೃತ್ಯದಲ್ಲಿ ತೊಡಗುವವರ ವಿರುದ್ಧವೂ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular