HomeKarnatakaರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ರೈತರ ಆತ್ಮಹತ್ಯೆ ಗಣನೀಯ ಇಳಿಕೆ: ಅಜೀಂ ಪ್ರೇಮ್ ಜೀ ವಿವಿ ಅಧ್ಯಯನ...

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ರೈತರ ಆತ್ಮಹತ್ಯೆ ಗಣನೀಯ ಇಳಿಕೆ: ಅಜೀಂ ಪ್ರೇಮ್ ಜೀ ವಿವಿ ಅಧ್ಯಯನ ವರದಿ

ಬೆಂಗಳೂರು: ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಈ ಸಾಲಿನಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂಬುದು ಅಜೀಂ ಪ್ರೇಮ್‌ ಜೀ ವಿಶ್ವವಿದ್ಯಾಲಯದವರು ನಡೆಸಿರುವ ಅಧ್ಯಯನ ವರದಿಯಲ್ಲಿ ಬಹಿರಂಗಗೊಂಡಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇದೇ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯಿಂದ ಶೇ.80 ಮಹಿಳೆಯರು ತಾವು ಆರ್ಥಿಕ ಸ್ವಾತಂತ್ರ್ಯ ಪಡೆದಿದ್ದು, ಕುಟುಂಬದ ನಿರ್ಧಾರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶೇ.37 ಫಲಾನುಭವಿಗಳು ಗ್ಯಾರಂಟಿ ಹಣವನ್ನು ಸಾಲ ಮರುಪಾವತಿಗಾಗಿ ಬಳಕೆ ಮಾಡಿಕೊಂಡು, ಋಣಮುಕ್ತರಾಗುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಒಟ್ಟಿನಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳ ಫಲ ನಾಡಿನ ಜನರ ಬದುಕಿನಲ್ಲಿ ಕಾಣುತ್ತಿರುವುದು ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ.

ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿಭಾಗ್ಯಗಳೆಂದು ಹೀಗಳೆಯುತ್ತಿದ್ದವರ ಎದುರು ಗ್ಯಾರಂಟಿ ಯೋಜನೆಯು ಜನರ ಬದುಕು ಬದಲಿಸಿ, ಗೆದ್ದುಬೀಗಿದೆ ಎಂದು ಸಿಎಂ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular