HomeKarnatakaನೆಹರು, ಗಾಂಧಿ ಬಗ್ಗೆ ಅವಹೇಳನಕಾರಿ, ದ್ವೇಷ ಭಾಷಣ: ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು

ನೆಹರು, ಗಾಂಧಿ ಬಗ್ಗೆ ಅವಹೇಳನಕಾರಿ, ದ್ವೇಷ ಭಾಷಣ: ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು

ಯಾದಗಿರಿ: ನೆಹರು, ಗಾಂಧಿ ಬಗ್ಗೆ ಅವಹೇಳನಕಾರಿ, ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೇಸ್ ದಾಖಲಾಗಿದೆ. ಗುರುಮಠಕಲ್ ಠಾಣೆ ಪೋಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿದ್ದಾರೆ.

ಫೆಬ್ರವರಿ 21ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ನಡೆದಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಯತ್ನಾಳ್ ದ್ವೇಷ ಭಾಷಣ ಮಾಡಿದ್ದರು. ಕಾರ್ಯಕ್ರಮದ ವೇಳೆ ಗಾಂಧಿ, ನೆಹರು ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಗಾಂಧಿ ಭಾರತ ಅಲ್ಲ, ಪಾಕಿಸ್ತಾನದ ರಾಷ್ಟ್ರಪಿತ ಎಂದು ಹೇಳಿದ್ದರು. ನೆಹರು ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಇದೇ ಕಾರಣಕ್ಕೆ ಯತ್ನಾಳ್ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಬಿಎನ್ಎಸ್ 196, 299, 302, 352, 353ರ ಅಡಿ ಕೇಸ್ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular