HomeKarnatakaಬ್ಯಾಂಕ್‌ಗಳಲ್ಲಿ ಕನ್ನಡ ಬಳಕೆ ಕಡ್ಡಾಯ: ಖಡಕ್ ಸೂಚನೆ

ಬ್ಯಾಂಕ್‌ಗಳಲ್ಲಿ ಕನ್ನಡ ಬಳಕೆ ಕಡ್ಡಾಯ: ಖಡಕ್ ಸೂಚನೆ

ಬ್ಯಾಂಕುಗಳಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಬೇಕು ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಸೂಚನೆ ನೀಡಿದ್ದಾರೆ.

ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನೇತೃತ್ವದಲ್ಲಿ ನಡೆದ ಜಿಲ್ಲಾ ಸಲಹಾ ಸಮಿತಿ ಹಾಗೂ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಬ್ಯಾಂಕುಗಳಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ ಕನ್ನಡ ಬಳಸಬೇಕು” ಎಂದರು.

“ಬ್ಯಾಂಕಿನ ಎಲ್ಲಾ ಅರ್ಜಿಗಳು, ಚಲನ್ ಮತ್ತು ಸುತ್ತೋಲೆಗಳು ಆಂಗ್ಲ ಮತ್ತು ಹಿಂದಿಯೊಂದಿಗೆ ಕಡ್ಡಾಯವಾಗಿ ಸ್ಥಳೀಯ ಭಾಷೆಯಲ್ಲಿಯೂ ಲಭ್ಯವಿರಬೇಕು. ಗ್ರಾಮೀಣ ಭಾಗದ ಜನರಿಗೆ ಭಾಷೆಯ ಸಮಸ್ಯೆಯಿಂದ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಯಾವುದೇ ರೀತಿಯ ಅಡೆತಡೆ ಅಥವಾ ನಿರಾಶೆಯಾಗಬಾರದು” ಎಂದು ನಿರ್ದೇಶನ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಪ್ರತಿ ಶಾಖೆಯಲ್ಲಿ ಕನ್ನಡದಲ್ಲಿ ವ್ಯವಹರಿಸುವ ಸಿಬ್ಬಂದಿಯನ್ನು ಕಡ್ಡಾಯವಾಗಿ ನೇಮಿಸಬೇಕು. ತಮ್ಮ ವ್ಯಾಪ್ತಿಯ ಎಲ್ಲಾ ಶಾಖೆಗಳಲ್ಲಿ ಈ ನಿಯಮಗಳು ಪಾಲನೆಯಾಗುತ್ತಿರುವ ಕುರಿತು ಜಿಲ್ಲಾ ಮಟ್ಟದ ಬ್ಯಾಂಕ್ ಸಮನ್ವಯಾಧಿಕಾರಿಗಳು ಮತ್ತು ಪ್ರತಿನಿಧಿಗಳು ಖಚಿತಪಡಿಸಿಕೊಳ್ಳಬೇಕು” ಎಂದು ಸೂಚನೆ ನೀಡಿದರು.

ಠೇವಣಿ ವ್ಯವಹಾರ: ಚಿತ್ರದುರ್ಗ ಜಿಲ್ಲೆಯ ವಿವಿಧ ಬ್ಯಾಂಕ್‍ಗಳಲ್ಲಿ 10 ವರ್ಷಗಳಿಗೂ ಹೆಚ್ಚು ಕಾಲ ಯಾವುದೇ ವ್ಯವಹಾರವಿಲ್ಲದೆ ಉಳಿದಿರುವ ಹಕ್ಕು ಪಡೆಯದ ಠೇವಣಿಗಳನ್ನು ವಾರಸುದಾರರಿಗೆ ತಲುಪಿಸಲು ವಿಶೇಷ ಅಭಿಯಾನವನ್ನು ಚುರುಕುಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ 3,08,898 ನಿಷ್ಕ್ರಿಯ ಖಾತೆಗಳಲ್ಲಿ ಒಟ್ಟು 67 ಕೋಟಿ ಹಣವಿದೆ. ಈ ಪೈಕಿ ಕಳೆದ ಅಕ್ಟೋಬರ್ 1 ರಿಂದ ಡಿಸೆಂಬರ್ 31 ವರೆಗೆ ನಡೆದ ಅಭಿಯಾನದಲ್ಲಿ 122 ಪ್ರಕರಣಗಳನ್ನು ವಿಲೇವಾರಿ ಮಾಡಿ 5.52 ಕೋಟಿ ರೂ. ಗಳನ್ನು ಸಂಬಂಧಪಟ್ಟವರಿಗೆ ಹಿಂದಿರುಗಿಸಲಾಗಿದೆ. ಇದು ಒಟ್ಟು ಮೊತ್ತದ ಕೇವಲ ಶೇ.10 ರಷ್ಟಿದ್ದು ಅಭಿಯಾನದಲ್ಲಿ ಉತ್ತಮ ಪ್ರಗತಿಯಾಗಿರುವುದಿಲ್ಲ.

ಬ್ಯಾಂಕ್‍ಗಳಲ್ಲಿ ಸಾರ್ವಜನಿಕರ ಹಣ ವಾರಸುದಾರರಿಲ್ಲದೆ ಉಳಿಯಬಾರದು. ಅದನ್ನು ಸಂಬಂಧಿಸಿದ ವಾರಸುದಾರರಿಗೆ ತಲುಪಿಸುವುದು ಬ್ಯಾಂಕ್‍ಗಳ ಜವಾಬ್ದಾರಿಯಾಗಿದೆ. ಒಂದು ತ್ರೈಮಾಸಿಕಕ್ಕೆ ಮಾತ್ರ ಈ ಅಭಿಯಾನ ಸೀಮಿತವಾದೇ, ವಾರಸುದಾರರನ್ನು ಗುರುತಿಸಿ ಹಣ ಹಿಂದಿರುಗಿಸುವ ಪ್ರಕ್ರಿಯೆಯು ನಿರಂತರವಾಗಿ ನಡೆಯಬೇಕು ಎಂದು ಸೂಚಿಸಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular